ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗಲೂ ಸಿದ್ದನಿದ್ದೇನೆ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿದರೆ ನಾನು ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ಸಮಯ ಕೊಟ್ರೆ ಒಂದೆರಡು ದಿನಗಳಲ್ಲಿ ದೆಹಲಿಗೆ ತೆರಳುತ್ತೇನೆ. ಸಂಪುಟ ವಿಸ್ತರಣೆಯ ಜೊತೆಗೆ ಇತರೆ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಬೇಕಿಹೈಕಮಾಂಡ್ ಒಪ್ಪಿದ್ರೆ ಸಂಪುಟ ವಿಸ್ತರಣೆ; ಸಿಎಂ ಬಿಎಸ್‍ವೈ ಹೇಳಿಕೆದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಸತ್ಯಕ್ಕೆ ಜಯ ಸಿಕ್ಕಿದೆ; ಬಿಎಸ್‍ವೈ
ಇದೇ ವೇಳೆ, ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ ಅಡ್ವಾಣಿ ಸೇರಿ ಬಿಜೆಪಿ ನಾಯಕರಿಗೆ ಕೋರ್ಟ್ ಕ್ಲೀನ್‍ಚಿಟ್ ನೀಡಿರುವುದು ಸತ್ಯಕ್ಕೆ ಜಯ ಸಿಕ್ಕಿದೆ. ಈ ಹೋರಾಟದಲ್ಲಿ ನಾನು ಸಹ ಭಾಗಿಯಾಗಿದ್ದೆ. ನನಗೂ ಈ ತೀರ್ಪು ವೈಯಕ್ತಿಕವಾಗಿ ಸಂತದ ತಂದಿದೆ ಎಂದಿದ್ದಾರೆ.
ಎಲ್.ಕೆ ಅಡ್ವಾಣಿ ಯಶಸ್ವೀ ಹೋರಾಟದಿಂದಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇವತ್ತು ಭಾರತೀಯರೆಲ್ಲರೂ ಸಂತೋಷ ಪಡುವ ದಿನವಾಗಿದೆ. ದೇಶದ ಕೋಟ್ಯಂತರ ಜನರು ತೀರ್ಪಿಗಾಗಿ ಕಾಯುತ್ತಿದ್ದರು. ಸಿಬಿಐ ವಿಶೇಷ ನ್ಯಾಯಾಲಯ ಐತಿಹಾಸಿಕ ತೀರ್ಪ ಕೊಟ್ಟಿದೆ ಎಂದು ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.








