ರಿಪೀಟರ್ಸ್ ಕಥೆ ಏನು..? : ಪಿಯು ಫಲಿತಾಂಶಕ್ಕೆ ಹೈಕೋರ್ಟ್ High Court ತಡೆ
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದೆ. ಆದ್ರೆ ಇದೀಗ ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಸಾಮಾನ್ಯ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ರೆ ರಿಪೀಟರ್ಸ್ ಗಳ ಕಥೆ ಏನು..? ಈ ವಿಚಾರವಾಗಿ ಹೈಕೋರ್ಟ್ ಗೆ ರಿಪೀಟರ್ಸ್ ಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್, ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಾತ್ಕಾಲಿಕ ತಡೆ ನೀಡಿದೆ.
ಅರ್ಜಿಯ ವಿಚಾರಣೆ ವೇಳೆ ಕೋರ್ಟ್, ಸಾಮಾನ್ಯ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ ರಿಪೀಟರ್ಸ್‍ಗೆ ಮಾತ್ರ ಪರೀಕ್ಷೆ ನಡೆಸುವುದು ಸರಿಯಲ್ಲ.
ಪಾಸ್ ಮಾಡುವುದಾದರೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಬೇಕು. ತಾರತಮ್ಯ ಮಾಡುತ್ತಿರುವ ಉದ್ದೇಶವೇನು ಎಂಬ ಬಗ್ಗೆ ಮಾಹಿತಿ ನೀಡುವಂತೆ ಕೋರ್ಟ್ ಆದೇಶಿಸಿದೆ.








