ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ Saaksha Tv
ಬೆಂಗಳೂರು: ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಈ ಗುಂಡಿಗಳಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಸಾಕಷ್ಟು ತೊಂದರೆ ಯಾಗುತ್ತಿತ್ತು, ಇಂತಹ ಗುಂಡಿಗಳನ್ನು ಬಿಬಿಎಂಪಿ ಮುಚ್ಚಿದರು ಮತ್ತೆ ಮಳೆಗಾಲದಲ್ಲಿ ಪ್ರತ್ಯಕ್ಷವಾಗುತ್ತಿದ್ದವು.
ಈ ಕುರಿತು ಹೈಕೋರ್ಟ್ ದುರಸ್ತಿಪಡಿಸಿದ ರಸ್ತೆಗಳು ದೀರ್ಘಾವಧಿ ಬಾಳಿಕೆ ಏಕೆ ಬರುವುದಿಲ್ಲ ಪ್ರಶ್ನಿಸಿದೆ. ಗುಂಡಿಗಳನ್ನು ಮುಚ್ಚಲು ಯಾವ ತಂತ್ರಜ್ಞಾನ, ಯಾವ ಕಾರ್ಯವಿಧಾನ ಅನುಸರಿಸಲಾಗುತ್ತದೆ..? ಇದಕ್ಕೆಲ್ಲ ಪಾಲಿಕೆ ಮುಖ್ಯ ಇಂಜಿನಿಯರ್ ಹೊಣೆಯಾಗುತ್ತಾರೆ. ಅವರನ್ನು ಕಂಬಿ ಹಿಂದೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಆರ್. ಅವಸ್ಥಿ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಬೆಸ್ಕಾಂ ಮತ್ತು ಜಲಮಂಡಳಿ ಸೇರಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದು, ನಿಗದಿತ ವೇಳೆಗೆ ಕಾಮಗಾರಿ ಮುಗಿಸುವುದಿಲ್ಲ. ಈ ನಿಗದಿತ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಮುಗಿಸದ ಪ್ರಾದಿಕಾರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಮುಂದಿನ ವಿಚಾರಣೆಗೆ ಪಾಲಿಕೆಯ ಮುಖ್ಯ ಇಂಜಿನಿಯರ್ ಖುದ್ದು ಹಾಜರಾಗಬೇಕು ಎಂದು ಸೂಚಿಸಿ, ಫೆಬ್ರವರಿ 7ಕ್ಕೆ ವಿಚಾರಣೆ ಮುಂದೂಡಿದೆ.