ಆನ್ ಲೈನ್ ಗೇಮಿಂಗ್ ಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ Saaksha Tv
ಬೆಂಗಳೂರು: ಕರ್ನಾಟಕದಲ್ಲಿ ಆನ್ಲೈನ್ ಗೇಮಿಂಗ್ಗೆ ಇಂದು ಹೈಕೋರ್ಟ್ ಅನುಮತಿ ನೀಡಿದೆ.
ಆನ್ಲೈನ್ ಗೇಮಿಂಗ್ಗೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಸರಕಾರದ ಆದೇಶವನ್ನು ರದ್ದು ಪಡಿಸಿದೆ. ಸರಕಾರದ ಕ್ರಮ ಸಂವಿಧಾನ ಬದ್ದವಾಗಿಲ್ಲ. ಆನ್ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸಂವಿಧಾನ ಬದ್ಧವಾದ ಶಾಸನ ರೂಪಿಸಲು ಸರ್ಕಾರ ಸ್ವತಂತ್ರವಿದೆ. ಆದರೆ ಈಗಿನ ಆದೇಶ ಕಾನೂನುಬಾಹಿರ ಎಂದು ಹೈಕೋರ್ಟ್ ತಿಳಿಸಿದೆ.
ಕರ್ನಾಟಕ ಸರಕಾರ ಆನ್ಲೈನ್ ಗೇಮ್ ಬ್ಯಾನ್ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಸರಕಾರದ ಈ ಕ್ರಮವನ್ನು ಗೇಮಿಂಗ್ ಕಂಪನಿಗಳು ಕೋರ್ಟ್ಗೆ ಪ್ರಶ್ನಿಸಿದ್ದವು. ನಿಷೇಧ ಪ್ರಶ್ನಿಸಿದ್ದ ಅರ್ಜಿ ಕುರಿತು ಇಂದು ತೀರ್ಪು ಹೊರ ಬಿದ್ದಿದೆ. ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ರ ಪೀಠ ಆನ್ಲೈನ್ ಗೇಮ್ಗೆ ಗ್ರೀನ್ ಸಿಗ್ನಲ್ ನೀಡಿದೆ.
ಸರಕಾರ ಅಕ್ಟೋಬರ್ 10ರಿಂದ ಆನ್ಲೈನ್ ಗೇಮ್ನ ಬ್ಯಾನ್ ಮಾಡಿ, ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆಪ್ಗಳನ್ನು ಸ್ಥಗಿತಗೊಳಿಸಿತ್ತು.
2021 ಸೆಪ್ಟೆಂಬರ್ 04ಕ್ಕೆ ರಾಜ್ಯದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಮುಂದಿನ ಅಧಿವೇಶನದ ವೇಳೆ ಸರಕಾರ ಸದನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸಚಿವ ಜೆ ಸಿ ಮಾಧುಸ್ವಾಮಿ ಅಂದು ಹೇಳಿದ್ದರು.