ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ ಮರು ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ. ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ನಾಲ್ಕು ವಾರದಲ್ಲಿ ಮತ ಎಣಿಕೆ ನಡೆಸಲು ಆದೇಶಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದರು. ಜೊತೆಗೆ, ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: PIL ವಜಾಗೊಂಡಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಗರಂ; “ಸೆಕ್ಯುಲರಿಸಂ ಹೆಸರಲ್ಲಿ ಸಂಸ್ಕೃತಿಗೆ ಅಪಮಾನವೇ?”
ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ. ಈ ಮೂಲಕ ಕೆಎಂಎಪ್ ಅಧ್ಯಕ್ಷರಾಗುವ ಕನಸು ಕಂಡಿದ್ದ ನಂಜೇಗೌಡರಿಗೆ ನಿರಾಸೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








