ಗೋಹತ್ಯೆ ನಿಷೇಧ ಕಾಯ್ದೆ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಪರ ವಿರೋಧ ವಾದಗಳ ಮಧ್ಯೆ ರಾಜ್ಯ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ.
ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠದಿಂದ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ಫೆಬ್ರವರಿ 17ರೊಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.
ಸೆಕ್ಷನ್ 5 ರಡಿ ಕ್ರಮ ಜರುಗಿಸದಂತೆ ಅರ್ಜಿದಾರರ ಪರ ವಕೀಲರಿಂದ ಮನವಿ ಮಾಡಲಾಗಿದ್ದು, ಇದರಿಂದ ಜಾನುವಾರು ಸಾಗಣೆಗೆ ಅಡ್ಡಿ ಹಾಗೂ ಅನಗತ್ಯ ಕಿರುಕುಳವಾಗಲಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಕೆಯಾಗಿದೆ.
ಅಲ್ಲದೆ ಈ ಅರ್ಜಿ ಇತ್ಯರ್ಥವಾಗುವರೆಗೆ ಸುಗ್ರೀವಾಜ್ಞೆಗೆ ತಡೆ ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಈ ಸಂಬಂಧ ಸ್ಪಷ್ಟನೆ ನೀಡಲು ಕಾಲಾವಕಾಶ ಕೋರಿದ್ದಾರೆ. ಜನವರಿ 18ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel



High Court 




