ಪಿಎಂ ಕೇರ್ ಬಗ್ಗೆ ಸೋನಿಯಾ ಗಾಂಧಿ ಟ್ವೀಟ್ ಕೇಸ್ : ಪೊಲೀಸರಿಗೆ ಕೋರ್ಟ್ HIGH COURT ನೋಟಿಸ್
ಬೆಂಗಳೂರು : ಪಿಎಂ ಕೇರ್ ಫಂಡ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪನಂಬಿಕೆ ಹುಟ್ಟಿಸುವ ರೀತಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದಾಖಲಿಸಿರುವ ದೂರಿನ ಅಂತಿಮ ತನಿಖಾ ವರದಿ ಸಲ್ಲಿಸದ ಹಿನ್ನೆಲೆ ರಾಜ್ಯ ಸರ್ಕಾರ ಹಾಗೂ ಸಾಗರ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪಿಎಂ ಕೇರ್ ನಿಧಿಯ ಹಣ ವೈಯಕ್ತಿಕವಾಗಿ ಬಳಕೆಯಾಗುತ್ತಿದ್ದು, ಬಡಜನರಿಗೆ ಉಪಯೋಗವಾಗುತ್ತಿಲ್ಲ ಎಂದು ಸೋನಿಯಾ ಗಾಂಧಿ ಅವರು 2020ರ ಮೇ 11ರಂದು ರಾಷ್ಟ್ರೀಯ ಕಾಂಗ್ರೆಸ್‍ನ ಅಧಿಕೃತ ಟ್ವಿಟ್ಟರ್ ಖಾತೆ ‘ಎನ್‍ಐಸಿ ಇಂಡಿಯಾ’ ಮೂಲಕ ಟ್ವೀಟ್ ಮಾಡಿದ್ದರು. ಈ ಬಗ್ಗೆ ವಕೀಲ ಕೆ.ವಿ.ಪ್ರವೀಣ್ ಕುಮಾರ್ ಎಂಬುವರು ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಭಾರತ ಸರ್ಕಾರದ ವಿರುದ್ಧ ನಾಗರಿಕರಲ್ಲಿ ಅಪನಂಬಿಕೆ ಉಂಟು ಮಾಡುವ ಮತ್ತು ನಾಗರಿಕರನ್ನು ಎತ್ತಿ ಕಟ್ಟಿದ್ದಾರೆ ಎಂದು ಆರೋಪಿಸಿ ಸಾಗರ ನಗರ ಪೆÇಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಈ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸಲು ಸರ್ಕಾರ ಮತ್ತು ಪೆÇಲೀಸರಿಗೆ ನಿರ್ದೇಶಿಸುವಂತೆ ಕೋರಿ ದೂರುದಾರ ವಕೀಲ ಕೆ.ವಿ. ಪ್ರವೀಣ್ ಎಂಬುವವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪೆÇಲೀಸ್ ಮಹಾ ನಿರ್ದೇಶಕ, ಶಿವಮೊಗ್ಗ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಸಾಗರ ನಗರ ಪೆÇಲೀಸ್ ಠಾಣೆ ಇನ್ಸ್‍ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಿದೆ. ಹಾಗೆ ವಿಚಾರಣೆಯನ್ನು ಮುಂದೂಡಿದೆ.
