ADVERTISEMENT
Wednesday, April 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕೆ.ಜೆ ಜಾರ್ಜ್, ಇಬ್ಬರು ಅಧಿಕಾರಿಗಳಿಗೆ ಹೈಕೋರ್ಟ್ ರಿಲೀಫ್

Kariyappa N by Kariyappa N
November 5, 2020
in Newsbeat, Politics, Samagra karnataka, ರಾಜ್ಯ
dysp case
Share on FacebookShare on TwitterShare on WhatsappShare on Telegram

ಮಡಿಕೇರಿ: ಕೊಡಗಿನ ಹೈಪ್ರೊಫೈಲ್ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ ಜಾರ್ಜ್, ಇಬ್ಬರು ಅಧಿಕಾರಿಗಳಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿದೆ.
ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಸಮನ್ಸ್ ಹಾಗೂ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಕೆ.ಜೆ ಜಾರ್ಜ್ ಹಾಗೂ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

sucide case
ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಆರೋಪಿಗಳ ವಿರುದ್ದ ಯಾವುದೇ ಸಾಕ್ಷ್ಯ ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದರೂ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಿತ್ತು.
ಬಿ ರಿಪೋರ್ಟ್ ಸಲ್ಲಿಕೆ ಹಿನ್ನೆಲೆಯಲ್ಲಿ ನೀಡಲಾಗಿರುವ ಸಮನ್ಸ್ ಹಾಗೂ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಆರೋಪಿಗಳಾಗಿದ್ದ ಮಾಜಿ ಸಚಿವ ಕೆಜೆ ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ ಪ್ರಸಾದ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರಿದ್ದ ಪೀಠ, ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಎತ್ತಿಹಿಡಿದಿದೆ. ಅಲ್ಲದೇ, ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್ ಹಾಗೂ ಪ್ರಕರಣವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

Related posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

April 29, 2026
SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

April 29, 2026

ಪ್ರಕರಣದ ಹಿನ್ನೆಲೆ..
ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಎಂ.ಕೆ. ಗಣಪತಿ ಅವರ ಮೃತದೇಹ 2016ರ ಜುಲೈ 7ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅತ್ಮಹತ್ಯೆಗೂ ಮುನ್ನ ಸ್ಥಳೀಯ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಗಣಪತಿ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್ ಹಾಗೂ ಪ್ರಣವ್ ಮೊಹಂತಿ ಕಿರುಕುಳ ನೀಡುತ್ತಿರುವ ಕುರಿತು ಆರೋಪ ಮಾಡಿದ್ದರು.

sucide case
ಘಟನೆ ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಮೊದಲಿಗೆ ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ಆರೋಪಿತರಿಗೆ ಕ್ಲೀನ್ ಚಿಟ್ ನೀಡಿದ್ದರು. ಗಣಪತಿ ಕುಟುಂಬದವರು ಕಾನೂನು ಹೋರಾಟ ನಡೆಸಿದ್ದರಿಂದ 2017ರಲ್ಲಿ ಸುಪ್ರೀಂಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು.
ಚೆನ್ನೈನಿಂದ ಬಂದಿ ಸಿಬಿಐ ಅಧಿಕಾರಿಗಳ ತನಿಖೆ ನಡೆಸಿ ಆರೋಪಿತರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಲಭ್ಯವಿಲ್ಲ ಎಂದು ಸೆಪ್ಟೆಂಬರ್ ತಿಂಗಳಲ್ಲಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿ, ಪ್ರಕರಣ ಮುಕ್ತಾಯಗೊಳಿಸುವಂತೆ ಕೋರಿದ್ದರು.
ಆದರೆ, ಬಿ ರಿಪೋರ್ಟ್ರಿ ತಿರಸ್ಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಆರೋಪಿತರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿತ್ತು. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ಜಾರ್ಜ್, ಮೊಹಾಂತಿ ಹಾಗೂ ಎ.ಎಂ ಪ್ರಸಾದ್‍ಗೆ ಸೂಚಿಸಿ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ಸಮನ್ಸ್ ಮತ್ತು ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ವರದಿ: ಗಿರಿಧರ್ ಕೊಂಪುಳೀರ

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cbidysp ganapati casee.m prasadhighcourt releafk.j Georgemohanti
ShareTweetSendShare
Join us on:

Related Posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
April 29, 2026
0

ನಾಡಿನ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಇಂದೇ ಸನ್ನದ್ಧರಾಗಿ. ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಸಾಹಸ ಮನೋಭಾವವುಳ್ಳ ಯುವಕರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಿದೆ....

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

by Shwetha
April 29, 2026
0

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಉಷ್ಣಾಂಶ ಹೆಚ್ಚಾದಂತೆ ಜನರು ತಂಪು ನೀಡುವ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿಶೇಷವಾಗಿ ಮದ್ಯಪ್ರಿಯರು ತಮ್ಮ ಹಳೆಯ...

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

by Shwetha
April 29, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. ಸತತವಾಗಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದ್ದ ಅಹಿಂದ ವರ್ಗ ಈಗ ಬಂಡಾಯದ ಬಾವುಟ ಹಾರಿಸಿದೆ. ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram