ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ಭೈರತಿ ಬಸವರಾಜುಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಅವರಿಗೆ ಬಂಧನದ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಈ ಪ್ರಕರಣದಲ್ಲಿ ಕೋಕಾ (COCA) ಕಾಯ್ದೆ ಅನ್ವಯಿಸುವುದಿಲ್ಲ ಎಂಬುದನ್ನು ಹೈಕೋರ್ಟ್ ಸ್ಪಷ್ಟಪಡಿಸಿದೆ. ಜೊತೆಗೆ, ನಿರೀಕ್ಷಣಾ ಜಾಮೀನು ವಿಚಾರದಲ್ಲಿ ಹೈಕೋರ್ಟ್ ಹಸ್ತಕ್ಷೇಪ ಮಾಡದೆ, ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಭೈರತಿ ಬಸವರಾಜುಗೆ ಸೂಚನೆ ನೀಡಿದೆ. ಅಲ್ಲಿಯವರೆಗೂ ಬಂಧನದಿಂದ ಯಾವುದೇ ರಕ್ಷಣೆಯನ್ನು ನೀಡಲು ಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್‌ನ ಈ ಆದೇಶದಿಂದಾಗಿ ತನಿಖಾ ಸಂಸ್ಥೆಗಳು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಪ್ರಕರಣ ಈಗಾಗಲೇ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕೋರ್ಟ್ ಆದೇಶದ ಬಳಿಕ ಮತ್ತಷ್ಟು ಕುತೂಹಲ ಮೂಡಿಸಿದೆ. ಮುಂದಿನ ಹಂತದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಭೈರತಿ ಬಸವರಾಜು ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುದರ ಮೇಲೆ ಪ್ರಕರಣದ ಮುಂದಿನ ದಿಕ್ಕು ನಿರ್ಧಾರವಾಗಲಿದೆ.








