ದ್ವೇಷದ ಆಟಕ್ಕೆ ಹೈಕೋರ್ಟ್ ತಡೆ ಹಿಡಿದಿದೆ ಎಂದು ನಟ ಉಪೇಂದ್ರ ಧನ್ಯವಾದ ಅರ್ಪಿಸಿದ್ದಾರೆ.
ಹೈಕೋರ್ಟ್ ಎಫ್.ಐ.ಆರ್‌ಗೆ ಮಧ್ಯಂತರ ತಡೆ ನೀಡಿದ ಬೆನ್ನಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಉಪೇಂದ್ರ, ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ, ತಾಯಿ ನನಗೆ ಕೊಡೆ. ಧನ್ಯವಾದಗಳು ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.
ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.








