ರಾಜ್ಯದಲ್ಲಿ ಕೋವಿಡ್ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳು ಸಿನೆಮಾ ತಾರೆಯರ ವಿರುದ್ಧ ಕ್ರಮ ಜರುಗಿಸದ ರಾಜ್ಯ ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಗರಂ ಆಗಿದೆ. ಕೊರೊನಾ ನಿಯಮ ಉಲ್ಲಂಘನೆ ಮಾಡಿದ ರಾಜಕಾರಣಿಗಳು ಸೆಲೆಬ್ರಿಟಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನಡೆ ವಿರುದ್ಧ ಅಸಮಾದಾನ ಹೊರಹಾಕಿರುವ ಹೈ ಕೋರ್ಟ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಲೆಜಿಟ್ಫೌಂಡೇಷನ್ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅಜಿರ್ಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಮಾಸ್ಕ್ ಧರಿಸದೆ, ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಸಿನಿಮಾ ನಟರು ಹಾಗೂ ರಾಜಕಾರಣಿಗಳ ವಿರುದ್ಧದ ಕೈಗೊಂಡ ಕಾನೂನು ಕ್ರಮಗಳ ಕುರಿತ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್ ಮಿಶ್ರಿತ ಕುಡಿಯುವ...








