ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ನಡೆಯುತ್ತಿರುವ ಮತದಾನದ ವೇಳೆ 175ನೇ ಬೂತ್ ನಂಬರ್‍ನಲ್ಲಿ ಮತದಾರರಿಗೆ ರೆಡ್ ಕಾರ್ಪೆಟ್ ಹಾಸಿ ಬರಮಾಡಿಕೊಳ್ಳಲಾಗುತ್ತಿದೆ.
ಈ ಮತಗಟ್ಟೆಯಲ್ಲಿ ಮತದಾರರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಬರುವಂತೆ ಸೂಚಿಸಲಾಗುತ್ತಿದೆ. ಶಿರಾ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತೆರೆಯಲಾಗಿರುವ ಮತಗಟ್ಟೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಮತಗಟ್ಟೆಯಲ್ಲಿ ಪುರುಷರಿಗೆ ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಪ್ರತ್ಯೇಕವಾಗಿ ಸಾಗಲು ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಅವರಣದಲ್ಲಿ ಮತದಾರರು ಬಂದು ಹೋಗಲು ಎರಡು ಪ್ರತ್ಯೇಕ ಸಾಲುಗಳನ್ನು ಹಾಕಲಾಗಿದ್ದು, ಸಹಾಯವಾಣಿ ಮತ್ತು ಸ್ಯಾನಿಟೈಸ್ ಮಾಡಲಾಗುತ್ತಿದೆ
ಅಲ್ಲದೆ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸುವಂತಹ ಭಿತ್ತಿಪತ್ರಗಳು ಮತಗಟ್ಟೆ ತುಂಬೆಲ್ಲಾ ಕಂಡುಬರುತ್ತಿವೆ.
ಪತಿ ಸಮಾಧಿಗೆ ಪೂಜೆ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ
ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಮತದಾನಕ್ಕೂ ಮೊದಲು ಪತಿ ಸತ್ಯನಾರಾಯಣ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಶಿರಾ ನಗರದ ಹೊರವಲಯದಲ್ಲಿರುವ ಸಮಾಧಿಗೆ ತೆರಳಿದ ಅಮ್ಮಜಮ್ಮ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ಮತಗಟ್ಟೆಗೆ ತೆರಳಿ ಅಮ್ಮಾಜಮ್ಮ ಮತದಾನ ಮಾಡಿದರು.
ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ ಮತದಾನ
ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ ಮತದಾನ ಮಾಡಿದರು. ಶಿರಾ ತಾಲೂಕಿನ ಚಿರತನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮತದಾನಕ್ಕೂ ಮೊದಲು ರಾಜೇಶ್‍ಗೌಡ ಗ್ರಾಮದೇವತೆ ಕರಿಯಮ್ಮ ದೇವಿಗೆ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ಪೂಜೆ ಸಲ್ಲಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel