ಕೊಳೆಗೇರಿ ಪ್ರದೇಶಗಳಲ್ಲಿ ಕೋವಿಡ್ ಲಸಿಕೆಗೆ ಆಸ್ಯತೆಯ ಬಗ್ಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್..!
ಬೆಂಗಳೂರು: ಕೊಳೆಗೇರಿ ಪ್ರದೇಶಗಳು ಮತ್ತು ಜನದಟ್ಟಣೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಕೋವಿಡ್ ಲಸಿಕೆ ನೀಡಲು ಹೆಚ್ಚಿನ ಆದ್ಯತೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಇನ್ನೂ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ಲಸಿಕೆ ತೆಗೆದುಕೊಳ್ಳಲು ಮನವೊಲಿಸಲು ರಾಜ್ಯ ಸರ್ಕಾರ ವಿಶೇಷ ಪ್ರಯತ್ನ ಮಾಡಬೇಕಾಗುತ್ತದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.
ಇದೇ ವೇಳೆ ಮಾರ್ಚ್ .24ರಂದು ಹೊರಡಿಸಿರುವ ಅಧಿಸೂಚನೆ ಅನುಷ್ಠಾನ ಸಂಬಂಧಿಸಿದಂತೆ ವಿವರ ಸಲ್ಲಿಸುವಂತೆ ಸೂಚನೆ ನೀಡಿದೆ. ಒಳಾಂಗಣ ಮತ್ತು ಹೊರಾಂಗಣದಲ್ಲಿ ನಡೆಯುವ ರಾಜಕೀಯ, ಧಾರ್ಮಿಕ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ಸೇರುವ ಜನರ ಪ್ರಮಾಣದಲ್ಲಿ ಎಷ್ಟು ನಿರ್ಬಂಧ ಹೇರಲಾಗಿದೆ ಯಾವೆಲ್ಲಾ ನಿಯಮಗಳನ್ನು ಕೈಗೊಳ್ಳಲಾಗಿದೆ ಎಂದುದನ್ನ ವಿವರಣೆ ನೀಡುವಂತೆ ನಿರ್ದೇಶಿಸಿದೆ.
ಬಹುಬಾಷಾ ನಟ ಪ್ರಕಾಶ್ ರಾಜ್ ಅವರಿಗೆ 56 ನೇ ಹುಟ್ಟುಹಬ್ಬದ ಸಂಭ್ರಮ..!