ಆಕ್ಸಿಜನ್‌ ಇಲ್ಲದೇ ಇನ್ನೆಷ್ಟು ಮಂದಿ ಸಾಯಬೇಕು..? ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

1 min read
Saakshatv jobs

ಆಕ್ಸಿಜನ್‌ ಇಲ್ಲದೇ ಇನ್ನೆಷ್ಟು ಮಂದಿ ಸಾಯಬೇಕು..? ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು: ಚಾಮರಾಜನಗರದಲ್ಲಿ ಅಮ್ಲಜನಕ ಕೊರತೆಯಿಂದ  24 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.. ಅಲ್ಲದೇ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರದ ಮೀನಮೇಷ ಎಣಿಸುತ್ತಿರುವುದಕ್ಕೆ ಕೇಂದ್ರದ ವಿರುದ್ಧ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸುವವರೆಗೂ ನಾವು ಕಾಯಬೇಕಾ ಎಂದು ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿದೆ.

ಕರ್ನಾಟಕದ ಪಾಲಿನ ಆಕ್ಸಿಜನ್ ಕೋಟಾ ಹೆಚ್ಚಿಸುತ್ತಿರೋ ಇಲ್ಲವೋ.  ಕಡಿಮೆ ಆಕ್ಸಿಜನ್ ಬಳಕೆ ಇರುವ ಕಡೆ ಹೆಚ್ಚು ಕೊಡುತ್ತಿದ್ದೀರಿ, ಇನ್ನು ಎಷ್ಟು ಮಂದಿ ಆಕ್ಸಿಜನ್ ಇಲ್ಲದೆ ಸಾಯಬೇಕು ಎಂದು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ತಕ್ಷಣವೇ ರಾಜ್ಯಕ್ಕೆ ಆಕ್ಸಿಜನ್ ಪೂರೈಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಚಾಮರಾಜನಗರದ ಸಾವಿನ ಕುರಿತಾಗಿ ನಿವೃತ್ತ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸುವ ಬಗ್ಗೆ ಸರಕಾರದ ನಿಲುವನ್ನು ಕೋರ್ಟ್‌ ಕೇಳಿದೆ. ಆಕ್ಸಿಜನ್‌ ಕೊರತೆಯಿಂದ ಚಾಮರಾಜನಗರದ ಆಸ್ಪತ್ರೆಯಲ್ಲಿ ಸೋಂಕಿತರು ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಕೋರ್ಟ್‌ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.

ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd