ಹಿಜಾಬ್, ಕೇಸರಿ ಶಾಲು ಮಧ್ಯೆ ನೀಲಿ ಶಾಲು Saaksha Tv
ಚಿಕ್ಕಮಗಳೂರು: ಕಾಲೇಜಿಗೆ ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲು ಜೊತೆಗೆ ನೀಲಿ ಶಾಲು ಧರಿಸಿಕೊಂಡು ಕಾಲೇಜಿಗೆ ಬಂದಿರುವ ಘಟನೆ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆದಿದೆ,
ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನೀಲಿ ಶಾಲು ಧರಸಿ ಕಾಲೇಜಿ ಬಂದಿದ್ದಾರೆ. ನಂತರ ಹಿಜಾಬ್ ತೆಗೆಸಬಾರದೆಂದು ನೀಲಿ ಶಾಲು ಧರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.
ಅಲ್ಲದೇ ಜೈ ಭೀಮ್ ಘೋಷಣೆ ಕೂಗುತ್ತಾ ದಲಿತ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳಿಂದ ಜೈ ಶ್ರೀರಾಮ್ ಘೋಷಣೆ ಹಾಕಿದ್ದಾರೆ. ಇದರಿಂದ ಕಾಲೇಜಿನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಆದೇಶದ ಹೊರತಾಗಿಯೂ ಕುಂದಾಪುರ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಹಿಜಾಬ್ ಮತ್ತು ಕೇಸರಿ ವಿವಾದ ತಾರಕಕ್ಕೇರಿದೆ.