Hijab Controvercy : ಎಚ್ಚೆತ್ತುಕೊಂಡ ಬೆಂಗಳೂರು ನಗರ ಪೊಲೀಸರು
ಹಿಜಬ್ ವಿವಾದ ಭುಗಿಲೆದ್ದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಶಾಲಾ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ , ಯಾವುದೇ ಪ್ರತಿಭಟನೆಗಳಿಗೆ ಅಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ..
ಇನ್ನೂ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್, ನೇತೃತ್ವದಲ್ಲಿ ಸಭೆ ನಡೆದಿದೆ. ಬೆಂಗಳೂರಿನ ಶಾಲಾ ಕಾಲೇಜಿನಲ್ಲಿ ಒಂದು ಸುತ್ತಿನ ಸಭೆ ನಡೆಸಿ ಶಾಂತಿ ಕಾಪಾಡಲು ಪೊಲೀಸರು ಸೂಚಿಸಿದ್ದಾರೆ. ಎಲ್ಲಾ ಧಾರ್ಮಿಕ ಮುಖಂಡರ ಜೊತೆ ಸಭೆ ನಡೆಸಿ ಹಿಜಾಬ್ ಬಗ್ಗೆ ಪೊಲೀಸರು ಚರ್ಚೆ ನಡೆಸಿದ್ದಾರೆ.








