Hijab Controvercy : ಬಿಜೆಪಿ ನಾಯಕರು ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ..?? : ಕುಮಾರಸ್ವಾಮಿ
ರಾಮನಗರ : ಹಿಜಾಬ್ ಪ್ರಕರಣದ ವಿಚಾರಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ..
ರಾಮನಗರದ ಚನ್ನಪಟ್ಟಣದಲ್ಲಿ ಮಾತನಾಡಿರುವ ಅವರು ಇದು ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ಕಾಂಗ್ರೆಸ್ – ಬಿಜೆಪಿ ಪಕ್ಷಗಳ ಜೊತೆಗೆ ಹಲವು ಸಂಘಟನೆಗಳಿಗೆ ನಾನು ಪ್ರಶ್ನೆ ಕೇಳ್ತೇನೆ, ಅಮಾಯಕ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡ್ತಿದ್ದೀರಿ. ಈ ಸಂಘರ್ಷ ಯಾವ ಶಾಲೆಗಳಲ್ಲಿ ನಡೆಯುತ್ತಿದೆ.
ಇದು ದೊಡ್ಡದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ. ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ಸಂಘಟನೆಗಳ ನಾಯಕರ ಮಕ್ಕಳು ಯಾರು ಸರ್ಕಾರಿ ಶಾಲೆಯಲ್ಲಿ ಅವರ ಮಕ್ಕಳನ್ನ ಓದಿಸುತ್ತಿಲ್ಲ.
ಅವರೆಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ,,,??? ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿಲ್ಲ…
ಅಮಾಯಕ, ಬಡಮಕ್ಕಳ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ. ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿಸುತ್ತಿದ್ದಾರೆ. ಇಲ್ಲಿ ಅಮಾಯಕ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿಸಲಾಗದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ.
Politics : ಕನಕಪುರ ಬಂಡೆ ಕದ್ದು ಬೇರೆ ರಾಜ್ಯಕ್ಕೆ ಕಳಿಸಿದ್ದು ಡಿಕೆ ಬ್ರದರ್ಸ್ – ಈಶ್ವರಪ್ಪ
ಇದು ನಡಿತಿರೋದು ಸರ್ಕಾರಿ ಶಾಲೆಯಲ್ಲಿ. ಕಂಡವರ ಮಕ್ಕಳನ್ನ ಬಾವಿಗೆ ತಳ್ತಿದ್ದಾರೆ.. ಈ ರಾಜ್ಯದಲ್ಲಿ ಇದು ನಡೆಯುತ್ತಿದೆ. ಮಇದನ್ನ ಮಕ್ಕಳ ಪೋಷಕರು ಸಹ ಅರ್ಥ ಮಾಡಿಕೊಳ್ಳಬೇಕು. ಪ್ರತಿಭಟನೆ ಮಾಡ್ತಿರುವ ಮಕ್ಕಳ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈಗಾಗಲೇ ತಮ್ಮ ಸ್ವಾರ್ಥಕ್ಕೆ ರಾಜಕೀಯ ಪಕ್ಷಗಳು, ಸಂಘಟನೆಗಳು ಮಕ್ಕಳನ್ನ ಬಳಕೆ ಮಾಡಿಕೊಳ್ತಿದ್ದಾರೆ.
Bengaluru Rural : ಎಂಟಿಬಿ – ಶರತ್ ಬಚ್ಚೇಗೌಡರ ನಡುವೆ ಪ್ರೋಟೋಕಾಲ್ ಫೈಟ್…
ಮುಂದೆ ಮಕ್ಕಳ ವಿಡಿಯೋ ಇಟ್ಟುಕೊಂಡು ಕೋರ್ಟ್ ಕಚೇರಿಗೆ ಹೋಗುವಂತೆ ಮಾಡ್ತಾರೆ. ಈಗಾಗಲೇ ಕೆಲವರ ಮೇಲೆ FIR ಆಗಿದೆ, ಇದು ನಿರಂತರವಾಗಿ ನಡೆಯುತ್ತದೆ. ಎರಡೊತ್ತಿನ ಊಟಕ್ಕೂ ಗತಿ ಇರಲ್ಲ ಆ ಮಕ್ಕಳಿಗೆ. ಸಾವಿರಾರು ಜನ ಮಕ್ಕಳ ಮೇಲೆ ಕೇಸ್ ಬೀಳಲಿದೆ. ಇದನ್ನ ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು ಎಂದು ಕಿಡಿಕಾರಿದ್ದಾರೆ..