Hijab COntrovercy : ಶಿವಮೊಗ್ಗದಲ್ಲಿ ಹಿಜಾಬ್ ಹೈಡ್ರಾಮಾ
ಶಿವಮೊಗ್ಗ : ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಾರಕ್ಕೇರುತ್ತಿದೆ.
ಇಂದು ಶಿವಮೊಗ್ಗದ ಮತ್ತೋಂದು ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿತ್ತು..
ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಗಾಗಿ ಪ್ರತಿಭಟನೆ ನಡೆಸಿದರು.
ಹಿಜಾಬ್ ಗೆ ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿ ಆಕ್ರೋಶ ಹೊರಹಾಕಿದ್ದಾರೆ. ಉಪನ್ಯಾಸಕರು ಮನವೊಲಿಸಿದರೂ ಬಗ್ಗದ ವಿದ್ಯಾರ್ಥಿನಿಯರು ಹಿಜಾಬ್ ಗಾಗಿ ಪಟ್ಟು ಹಿಡಿದಿದ್ದರು. ನಮಗೆ ಶಿಕ್ಷಣವೂ ಬೇಕು.. ಹಿಜಾಬ್ ಕೂಡ ಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ ಕಾಲೇಜಿನಿಂದ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ.







