Hijab Controvercy : ಗೃಹ ಕಚೇರಿ ಕೃಷ್ಣಾದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಸಂಬಂಧ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆದಿದೆ.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಿಎಂ ಮಹತ್ವದ ಸಭೆ ನಡೆಸಿದ್ದು,
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಟ್ಟದ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಐಜಿಪಿ, ಹಾಗೂ ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.
ಗೃಹ ಕಚೇರಿ ಕೃಷ್ಣಾದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದೆ.
ಸೋಮವಾರದಿಂದ ಶಾಲೆ ಆರಂಭಿಸಲು ನಿರ್ಧಾರ ಸರ್ಕಾರ ಮಾಡಿದೆ.
ಇನ್ನೂ ಶಾಲೆ ಆರಂಭವಾದ್ರೆ ಮತ್ತೆ ಮಕ್ಕಳಲ್ಲಿ ಗಲಭೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಈ ಸಭೆಯಲ್ಲಿ ಕ್ರಮಗಳ ಬಗ್ಗೆ ಬರ್ಚಿಸಲಾಗಿದೆ.
ಕೋರ್ಟ್ ಕೊಟ್ಟಿರೋ ಆದೇಶದ ಹೊರತಾಗ್ಯೂ ಹಿಜಾಬ್, ಕೇಸರಿ ಧರಿಸಿ ಬಂದ್ರೆ ಕಂಟೆಮ್ಟ್ ಟು ಕೋರ್ಟ್ ಆಗಲಿದೆ.
ಕಂಟೆಮ್ಟ್ ಟು ಕೋರ್ಟ್ ಆಗದಂತೆ ಎಚ್ಚರಿಕೆ ವಹಿಸೋ ಜವಾಬ್ದಾರಿ ಸರ್ಕಾರದ ಮೇಲಿದೆ.
ಹಾಗಾಗಿ ಡಿಸಿ, ಎಸ್ಪಿ ಹಾಗೂ ಶಿಕ್ಷಣಾಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆಗಳನ್ನ ನೀಡಿದ್ದಾರೆ.
ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಹೊರತುಪಡಿಸಿ, ಬೇರೆ ಯಾರಾದರೂ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ..