ದಾವಣಗೆರೆ : ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಸಂಘರ್ಷ ಭುಗಿಲೆದ್ದಿದೆ.. ಇದೀಗ ದಾವಣಗೆರೆಯ ಹರಿಹರದ ಪ್ರಥಮ ದರ್ಜೆ ಕಾಲೇಜಿನ ಬಳಿ ಗಲಾಟೆ ನಡೆದಿದೆ. ಪೊಲೀಸ್ ಹಾಗೂ ಸಾರ್ವಜನಿಕರ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ..
ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಂದಿದ್ದ ಗುಂಪು ಗಲಾಟೆ ಶುರು ಮಾಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಆದ್ರೆ ಗಲಾಟೆ ನಿಯಂತ್ರಣಕ್ಕೆ ಹೋದ ಪೊಲೀಸರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ… ಸ್ಥಳಕ್ಕೆ ಶಾಸಕ ಎಸ್ ರಾಮಪ್ಪ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.