ಕರಾವಳಿಯಲ್ಲಿ ಕಿಚ್ಚು ಹಚ್ಚಿಸಿದ್ದ ಬುರ್ಖಾ ವಿವಾದ ಈಗ ಕಾಫಿನಾಡಿಗೂ ಎಂಟ್ರಿ ಕೊಟ್ಟಿದೆ. ಬುರ್ಖಾ ಧರಿಸಿ ಇಬ್ಬರು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಓಡಾಡಿರುವ ಘಟನೆ ನಡೆದಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಐಡಿಎಸ್ಜಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಕಾಲೇಜಿನ ಕಾರಿಡಾರ್ನಲ್ಲಿ ಓಡಾಡಿರುವುದು, ಬುರ್ಖಾ ಧರಿಸಿಯೇ ತರಗತಿಗಳನ್ನು ಕೇಳುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು
ಕಾಲೇಜಿನಲ್ಲಿ ಈ ರೀತಿಯ ಘಟನೆ ನಡೆದಿಲ್ಲ. ಎಂದಿನಂತೆ ತರಗತಿಗಳು ನಡೆಸಿಕೊಂಡು ಹೋಗಲಾಗುತ್ತಿದೆ ಎಂದು ಐಡಿಎಸ್ಜಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಾಂದಿನಿ ಅವರು ತಿಳಿಸಿದ್ದಾರೆ.








