Hijab ತೀರ್ಪು | ಹಲವು ಜಿಲ್ಲೆಗಳ ಶಾಲಾ-ಕಾಲೇಜು ರಜೆ!
ಹಲವು ಜಿಲ್ಲೆಗಳಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
ಕಲಬುರಗಿಯಲ್ಲಿ ಶಾಲಾ–ಕಾಲೇಜಿಗೆ ರಜೆ ಘೋಷಣೆ
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144
ಇಂದು ಹಿಜಾಬ್ ಅರ್ಜಿಗಳ ಕುರಿತು ತೀರ್ಪು ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅಲ್ಲದೇ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂಥ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸೋಮವಾರ ರಾತ್ರಿಯಿಂದಲೇ ಕರ್ನಾಟಕ ಹೈಕೋರ್ಟ್ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇತ್ತ ಕಲಬುರಗಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಂಗಳವಾರ ಜಿಲ್ಲೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಅಲ್ಲದೆ ಮಾರ್ಚ್ 14ರ ರಾತ್ರಿ 8 ರಿಂದ ಮಾರ್ಚ್ 19ರ ಬೆಳಗ್ಗೆ 6 ಗಂಟೆ ವರೆಗೆ ಸಿ. ಆರ್. ಪಿ. ಸಿ. ಕಾಯ್ದೆ-1973 ಕಲಂ 144ರನ್ವಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
Hijab controversy holiday announced for school and colleges at some districts saaksha tv