Hijab |ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ hijab-controversy karnataka-high-court-refers-matter-to-larger-bench Saaksha Tv
ಬೆಂಗಳೂರು : ಹಿಜಬ್ ಪ್ರಕರಣದ ಅರ್ಜಿಗಳು ಕರ್ನಾಟಕ ಹೈಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಹಿಜಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಪೀಠದಲ್ಲಿ ನಡೆಯುತ್ತಿತ್ತು.
ಎರಡನೇ ದಿನದ ಆರಂಭದಲ್ಲಿಯೇ ನ್ಯಾಯಮೂರ್ತಿಗಳು ಅರ್ಜಿದಾರರ ಪರ ಮತ್ತು ಸರ್ಕಾರದ ಪರ ವಕೀಲರಿಗೆ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ನೀಡಬಹುದೇ ಎಂದು ಪ್ರಶ್ನಿಸಿದರು. ಈ ಪ್ರಕರಣದಲ್ಲಿ ಸಂವಿಧಾನದ ಪ್ರಶ್ನೆಗಳು ಅಡಗಿವೆ. ವೈಯಕ್ತಿಕ ಕಾನೂನಿನ ಕೆಲ ಅಂಶಗಳು ಪ್ರಸ್ತಾಪವಾಗಿವೆ. ಅರ್ಧ ಡಜನ್ ತೀರ್ಪುನ್ನು ಪ್ರಸ್ತಾಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಎರಡೂ ಕಡೆಯವರು ವಾದ ಮಂಡಿಸಿದ್ದಾರೆ. ಉದ್ಭವವಾಗಿರುವ ಪ್ರಶ್ನೆಗಳು ಬಹಳ ಮುಖ್ಯವಾಗಿವೆ. ಹೀಗಾಗಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗ ಮಾಡಲಾಗಿದೆ.
ಮುಖ್ಯ ನ್ಯಾಯಮೂರ್ತಿಗಳು ವಿಸ್ತೃತ ಪೀಠ ರಚಿಸುವ ಬಗ್ಗೆ ತೀರ್ಮಾನಿಸಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ವಿವೇಚನಾಧಿಕಾರ ಹೊಂದಿದ್ದಾರೆ.
ಇನ್ನು ಈ ಪ್ರಕರಣದ ವಿಚಾರಣೆ ದೀರ್ಘವಾಗಿರುವ ಕಾರಣ ಯಾವುದೇ ಮಧ್ಯಂತರ ಆದೇಶ ನೀಡುವುದಿಲ್ಲ ಎಂದು ತಿಳಿಸಿದ ಅವರು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗುವುದು ಎಂದರು.









