ಹಿಜಾಬ್ ವಿವಾದ – ಹೈಕೋರ್ಟ್ ತೀರ್ಪು ಸ್ವಾಗತಿಸಿದ ನಾಯಕರು… 

1 min read
CM Basavaraj Bommai Saaksha tv

ಹಿಜಾಬ್ ವಿವಾದ – ಹೈಕೋರ್ಟ್ ತೀರ್ಪು ಸ್ವಾಗತಿಸಿದ ನಾಯಕರು…

ದೇಶಾದ್ಯಂತ ವಿವಾದ ಎಬ್ಬಿಸಿದ್ದ  ಹಿಜಾಬ್ ವಿವಾದ ಅಂತಿಮ ತೀರ್ಪು ಇಂದು ಪ್ರಕಟವಾಗಿದೆ. ಮಹತ್ವದ ತೀರ್ಪು ನೀಡಿದೆ ಹೈಕೋರ್ಟ್  ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದು ತಿಳಿಸಿದೆ.  ಹಲವು ರಾಜಕೀಯ ನಾಯಕರು ಈ ತೀರ್ಪನ್ನ ಸ್ವಾಗತಿಸಿದ್ದಾರೆ.

ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ನಾವು ಕರ್ನಾಟಕ ಹೈಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇವೆ. ಈ ನೆಲ, ನೆಲದ ಕಾನೂನು ಅಂತಿಮ ಎಂದು ಸಚಿವ ನಾಗೇಶ್​ ಟ್ವೀಟ್​ ಮಾಡಿದ್ದಾರೆ.

ಹಿಜಾಬ್ ಪದ್ದತಿ ಕುರಿತು ಹೈಕೋರ್ಟ್ ತೀರ್ಪು | ಮಕ್ಕಳ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಇದು ನಮ್ಮ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಪ್ರಶ್ನೆಯಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೈಕೋರ್ಟ್‌ನ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ರಾಜ್ಯದ ಮುಸ್ಲಿಂ ವಿದ್ಯಾರ್ಥಿಗಳು ಬಹಳ ದಿನಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಯಾರೋ ದಾರಿ ತಪ್ಪಿಸಿದ್ದಾರೆ ಹಾಗಾಗಿ ಈ ಸಮಸ್ಯೆ ಉಂಟಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು, ಆದ್ದರಿಂದ ಎಲ್ಲರೂ ಆದೇಶವನ್ನು ಸ್ವೀಕರಿಸಬೇಕು: ಕರ್ನಾಟಕ ಸಚಿವ ಕೆ.ಎಸ್.ಈಶ್ವರಪ್ಪ

ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ; ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರ ಶೈಕ್ಷಣಿಕ ಅವಕಾಶಗಳು ಮತ್ತು ಹಕ್ಕುಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd