ಹಿಜಾಬ್ ವಿವಾದ – ವಿದ್ಯಾರ್ಥಿನಿಯರ ಶಿಕ್ಷಣದ ಭವಿಷ್ಯ ಕಸಿದುಕೊಳ್ಳಲಾಗುತ್ತಿದೆ- ರಾಹುಲ್ ಗಾಂಧಿ.
ಹಿಜಾಬ್ ವಿವಾದ – ವಿದ್ಯಾರ್ಥಿನಿಯರ ಶಿಕ್ಷಣದ ಭವಿಷ್ಯ ಕಸಿದುಕೊಳ್ಳಲಾಗುತ್ತಿದೆ- ರಾಹುಲ್ ಗಾಂಧಿ.
ಉಡುಪಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. , ವಿದ್ಯಾರ್ಥಿನಿಯರ ಶಿಕ್ಷಣದ ಭವಿಷ್ಯವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ಉತ್ತರ ಭಾರತದಲ್ಲಿ ಬಸಂತ ಪಂಚಮಿ ಪ್ರಯುಕ್ತ ಇಂದು ಸರಸ್ವತಿ ಆರಾಧನೆ ನಡೆಯುತ್ತದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, ಹಿಜಬ್ ಹೆಸರಿನಲ್ಲಿ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ನಾವು ಅವರ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಆಕೆ ಭಿನ್ನಾಭಿಪ್ರಾಯ ತೋರುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ತರಗತಿಗೆ ಬಂದಿದ್ದರು. ತರಗತಿಗೆ ವಿದ್ಯಾರ್ಥಿಗಳು ಸಮವಸ್ತ್ರದಲ್ಲೆ ಬರಬೇಕು ಎಂದು ಸರ್ಕಾರ ಆದೇಶ ನೀಡಿದೆ. ಇದಕ್ಕೆ ಕೆಲವು ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸಿದ್ದಾರೆ. ಹಿಜಬ್ ವಿವಾದ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉಡುಪಿಯಲ್ಲಿ ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನ ಗೇಟಿನ ಮುಂಬಾಗ ನಿಂತು ಪ್ರತಿಭಟನೆ ನಡೆಸಿದ್ದಾರೆ. ಕರಾವಳಿ ಹೊರತು ಪಡಿಸಿ ಇದೀಗ ಇತರ ಜಿಲ್ಲೆಗಳಿಗೂ ಹಿಜಬ್ ವಿವಾದ ವ್ಯಾಪಿಸಿದೆ.
ಕಳೆದ ಮೂರು ವಾರ ಕಳೆದರೂ ಹಿಜಬ್ ವಿವಾದ ಅಂತ್ಯಗೊಳ್ಳುವಂತೆ ಕಾಣುತ್ತಿಲ್ಲ. ಈ ಎಲ್ಲಾ ಘಟನೆಗಳ ನಡುವೆ ಹಿಜಬ್ ವಿವಾದದ ಪ್ರಕರಣವು ಹೈಕೋರ್ಟ್‍ನಲ್ಲಿದೆ. ಫೆ.8 ರಂದು ಹೈಕೋರ್ಟ್‍ನಿಂದ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ತೀರ್ಪು ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.








