ಕೇಸರಿ ಶಾಲು ವರ್ಸಸ್ ಹಿಜಾಬ್ ಫೈಟ್ : ಅನ್ ಲೈನ್ ಕ್ಲಾಸ್ ಬೇಡ
ಉಡುಪಿ : ರಾಜ್ಯದಲ್ಲಿ ಮತ್ತೆ ಕೇಸರಿ ಶಾಲು ವರ್ಸಸ್ ಹಿಜಾಬ್ ಫೈಟ್ ಶುರುವಾಗಿದ್ದು, ಮಂಗಳೂರು, ಉಡುಪಿ ಮೂಲದ ಕೆಲವು ಶಾಲೆಗಳ ವಿದ್ಯಾರ್ಥಿಗಳು ಈ ಬಗ್ಗೆ ಪ್ರೊಟೆಸ್ಟ್ ನಡೆಸುತ್ತಿದ್ದಾರೆ.
ಈ ಮಧ್ಯೆ ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ.
ನಮಗೆ ಯಾವುದೇ ಆನ್ಲೈನ್ ಕ್ಲಾಸ್ ಗಳು ಬೇಡ ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.
ನಾವು ಸಾಯನ್ಸ್ ವಿದ್ಯಾರ್ಥಿಗಳು ಇರೋದ್ರಿಂದ ನಮಗೆ ಆನ್ಲೈನ್ ಕ್ಲಾಸ್ ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ. ನಮಗೆ ಒಂದು ತಿಂಗಳ ತರಗತಿ ನಷ್ಟ ಆಗಿದೆ.
ಹೀಗಾಗಿ ನಾವು ಹಿಜಾಬ್ ಧರಿಸಿಯೇ ತರಗತಿಗಳಿಗೆ ಬರುತ್ತೇವೆ. ಸರಕಾರಿ ಕಾಲೇಜ್ ಆಗಿರುವುದರಿಂದ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ತಾರತಮ್ಯವನ್ನು ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇತ್ತ ಈ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿದ್ದು, ಈ ಬಗ್ಗೆ ಒಂದು ಸಮಿತಿ ರಚನೆ ಮಾಡಲಾಗಿದೆ.
ಈ ಸಮಿತಿ ವರದಿಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಬುರ್ಖಾ ನಿಷೇಧ ಮಾಡಬೇಕು ಅನ್ನೋ ಪ್ರಶ್ನೆ ಇಲ್ಲ ಎಂದಿದ್ದಾರೆ.