ಹಿಜಾಬ್ ವಿವಾದ | ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು Saaksha Tv
ಬೆಳಗಾವಿ: ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಭಂದ ನಿನ್ನೆ ಬೆಳಗಾವಿಯ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಘಟನೆ ನಡೆದಿದೆ.
ಉಡಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಪ್ರತಿದಿನ ತಾರಕಕ್ಕೇರುತ್ತಿದೆ. ರಾಜ್ಯದ ಕೆಲವು ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ವಿರೋಧಿಸಿ ಕೇಸರಿ ಶಾಲನ್ನು ಧರಿಸಿಕೊಂಡು ಬರುತ್ತಿದ್ದಾರೆ. ಸದ್ಯ ಹಿಜಾಬ್ ವಿವಾದ ಬೆಳಗಾವಿ ಜಿಲ್ಲೆಯ ಕಾಲೇಜುಗಳಲ್ಲೂ ಆರಂಭವಾಗಿದೆ. ನಿನ್ನೆ ಬೆಳಗಾವಿ ಜಿಲ್ಲೆಯ ರಾಮದುರ್ಗದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.
ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ. ಕೂಡಲೇ ಕೇಸರಿ ಶಾಲು ತೆಗಸಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ. ಜೊತೆಗೆ ಕಾಲೇಜಿಗೆ ಸಂಬಂಧವಿಲ್ಲದ ಯುವಕರು ಬಂದು ಈ ರೀತಿ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು. ಮುಂದಿನ ಸಾರಿ ಕಾಲೇಜಿಗೆ ಬಾರದಂತೆ ಯುವಕರಿಗೆ ಪಿಎಸ್ಐ ವಾರ್ನಿಂಗ್ ನೀಡಿದ್ದಾರೆ.
ನಿನ್ನೆಯ ಘಟನೆ ಬಳಿಕ ಇಂದು ಕಾಲೇಜಿಗೆ ಪ್ರಾಂಶುಪಾಲರಾದ ಆನಂದ ಲಾಲಸಂಗಿ ಆಗಮಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ನಿನ್ನೆ ನಡೆದ ಘಟನೆಯನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದು, ಇಂದು ಈ ಬಗ್ಗೆ ಮಾಹಿತಿ ಲಭಿಸಿದೆ.