ಶಾಲಾ – ಕಾಲೇಜುಗಳ ಮುಂದೆ ಪೊಲೀಸ್ ಬಿಗಿ ಭದ್ರತೆ – Saaksha Tv
ಬೆಂಗಳೂರು: ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ ಹಿಜಾಬ್ ವಿವಾದಕ್ಕೆ ತೆರೆ ಬಿದ್ದಿದ್ದು, ಬೆಂಗಳೂರಿನ ಶಾಲಾ – ಕಾಲೇಜುಗಳ ಮುಂದೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಈಗಾಗಲೇ ನಗರದಲ್ಲಿ ಒಂದು ವಾರ ಕಾಲ ಇಂದು ಬೆಳಿಗ್ಗೆಯಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದ ಬಹುತೇಕ ಶಾಲಾ – ಕಾಲೇಜುಗಳ ಮುಂದೆ ಪೊಲೀಸರು ಬ್ಯಾರಿಕೇಡ್ ಹಾಕಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಭದ್ರತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ.
ಅಲ್ಲದೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಅಂತಹವರನ್ನು ಮುಲಾಜಿಲ್ಲದೇ ವಶಕ್ಕೆ ಪಡೆದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ತಾಕೀತು ಮಾಡಿದ್ದಾರೆ. ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಒಟ್ಟಾರೆ ಬೆಂಗಳೂರು ನಗರದಲ್ಲಿ ಶೈಕ್ಷಣಿಕ ಸಂಸ್ಥೆಗಳ ಎದುರು 10 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ಕಲ್ಪಿಸಲಾಗಿದೆ.