Hijab | ನಾಳೆಯಿಂದ ಮೂರು ದಿನ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ Hijab | Three day vacation for all graduate colleges from tomorrow
ಬೆಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನ ಎಲ್ಲಾ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಶಿವಮೊಗ್ಗ, ಬಾಗಲಕೋಟೆ, ಮಂಡ್ಯ ಜಿಲ್ಲೆಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಅಲ್ಲಿಲ್ಲ ಲಾಠಿ ಚಾರ್ಜ್ ಕೂಡ ನಡೆದಿದೆ. ಹೀಗಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ರಜೆ ಘೋಷಣೆಮಾಡಲಾಗಿದೆ.
ನಾಳೆಯಿಂದ ರಾಜ್ಯದಾದ್ಯಂತ ಮೂರು ದಿನಗಳ ಕಾಲ ಪದವಿ ಕಾಲೇಜುಗಳು ಬಂದ್ ಆಗಿರಲಿವೆ.