ನಾಳೆಯಿಂದ ರಾಜ್ಯದ ಎಲ್ಲ ಶಾಲೆ – ಕಾಲೇಜುಗಳಿಗೆ ರಜೆ
ಬೆಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನ ರಾಜ್ಯದ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಶಿವಮೊಗ್ಗ, ಬಾಗಲಕೋಟೆ, ಮಂಡ್ಯ ಜಿಲ್ಲೆಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಅಲ್ಲಿಲ್ಲ ಲಾಠಿ ಚಾರ್ಜ್ ಕೂಡ ನಡೆದಿದೆ. ಹೀಗಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ರಜೆ ಘೋಷಣೆಮಾಡಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ” ಎಂದು ತಿಳಿಸಿದ್ದಾರೆ
ನಾಳೆಯಿಂದ ರಾಜ್ಯದಾದ್ಯಂತ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳು ಬಂದ್ ಆಗಿರಲಿವೆ.