Hijab Verdict – ಇಂದು ಸುಪ್ರೀಂ ತೀರ್ಪು | ನಗರದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಬೆಂಗಳೂರು : ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ಜೆ.ಜೆ ನಗರ, ಜೆ.ಸಿ ನಗರ, ಶಿವಾಜಿ ನಗರ, ಪುಲಕೇಶಿ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.
ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಸೂಕ್ತ ಭದ್ರತೆ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದು, ಹಿಜಾಬ್ ಪರವಾಗಿ ತೀರ್ಪು ಬಂದರೆ ಮುಸ್ಲಿಂ ಸಮುದಾಯದವರು ಸಂಭ್ರಮಿಸುವ ಸಾಧ್ಯತೆ ಇದೆ. ಈ ಸಮಯದಲ್ಲಿ ಹಿಂದೂ ಸಮುದಾಯದವರು ವಿರೋಧಿಸುವ ಸಾಧ್ಯತೆ ಕೂಡ ಇದೆ.
ಹಿಜಾಬ್ ವಿರೋಧವಾಗಿ ತೀರ್ಪು ಬಂದರೆ ಮುಸ್ಲಿಂ ಸಮುದಾಯದವರು ಧರಣಿ, ಪ್ರತಿಭಟನೆ ಮಾಡುವ ಸಾಧ್ಯತೆ ಇದೆ.
ಈ ಸಂಬಂಧ ಮಾಹಿತಿ ಸಂಗ್ರಹಿಸಬೇಕು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು.
ಮುಂಜಾಗ್ರತಾ ಕ್ರಮವಾಗಿ ಅಗತ್ಯ ಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ಪತ್ರ ಬರೆದಿದ್ದಾರೆ.