ಮಡಿಕೇರಿ: ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಬಸಪ್ಪ, ನಿಂಗಪ್ಪ ಹಾಗೂ ಆನಂದ ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ತಡೆಗೋಡೆ ನಿರ್ಮಾಣಕ್ಕೆ ಮಣ್ಣು ಅಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ಹೀಗಾಗಿ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಕಾರ್ಮಿಕ ರಾಜು ಅಲ್ಲಿದ್ದ ಇನ್ನಿತರ ಕಾರ್ಮಿಕರ ಸಹಾಯದಿಂದ ಪ್ರಾಣ ಉಳಿಸಿಕೊಂಡಿದ್ದಾರೆ.
ಸುಮಾರು 8 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಮೂವರು ಮಣ್ಣಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.








