ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಸಂಭವಿಸಿರುವ ಭೂಕುಸಿತಕ್ಕೆ 14 ಮಂದಿ ಕೊನೆಯುಸಿರೆಳೆದಿದ್ದಾರೆ.
ಕಲ್ಲುಬಂಡೆ ಮತ್ತು ಮಣ್ಣಿನ ಅವಶೇಷಗಳಡಿ ಈಗಲೂ 25ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭೂಕುಸಿತ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ.
ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.
ಅವಗಢದಲ್ಲಿ 14 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಗಳಿವೆ.
ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಇನ್ನು ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು.
ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಜೊತೆಗೆ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ 40 ಪ್ರಯಾಣಿಕರೊಂದಿಗೆ ಕಿನ್ನೌರ್ನ ರೆಕಾಂಗ್ ಪಿಯೋದಿಂದ ಶಿಮ್ಲಾಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಡಿದಾದ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತು.








