ಹಿಮಾಚಲದಲ್ಲಿ ಆಮ್ ಆದ್ಮಿ ಒಂದೇ ಒಂದು ಸ್ಥಾನ ಗೆಲ್ಲುವುದಿಲ್ಲ – ಅನುರಾಗ್ ಠಾಕೂರ್
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ನಡುವೆ ಮಾತಿನ ಸಮರ ಆರಂಭವಾಗಿದೆ, ರಾಜ್ಯದಲ್ಲಿ ಆಪ್ ಸರ್ಕಾರ ರಚಿಸುವ ಸಾಧ್ಯತೆಯನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಲೇವಡಿ ಮಾಡಿದ್ದಾರೆ.
ಹಿಮಾಚಲದಲ್ಲಿ ಸರ್ಕಾರ ರಚನೆಯನ್ನ ಪ್ರತಿಪಾದಿಸಿದ ಅನುರಾಗ್ ಠಾಕೂರ್, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
“ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ. ಅದರ ಬಗ್ಗೆ ನನಗೆ ವಿಶ್ವಾಸವಿರುವುದರಿಂದ ಹೇಳಿಕೆ ನೀಡುತ್ತೇನೆ” ಎಂದು ಠಾಕೂರ್ ದೃಢಪಡಿಸಿದ್ದಾರೆ.
“ಪ್ರೇಮ್ ಕುಮಾರ್ ಧುಮಾಲ್ ಬಹಳ ಹಿಂದಿನಿಂದಲೂ ರಾಜ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ, ಮತ್ತು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಅವರನ್ನು ಮೆಚ್ಚುತ್ತಾರೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ” ಎಂದು ಠಾಕೂರ್ ಹೇಳಿದ್ದಾರೆ.
ನವೆಂಬರ್ 12 ರಂದು ಹಿಮಾಚಲ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
AAP won’t win a single seat in Himachal assembly polls, says Anurag Thakur








