Himachal Election2022 – ಬಿಜೆಪಿ 62 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ 62 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಇವರಲ್ಲಿ 5 ಮಹಿಳೆಯರು ಸೇರಿದ್ದಾರೆ. ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಸಿರಾಜ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ನ ಚೇತ್ರಂ ಕಣದಲ್ಲಿದ್ದಾರೆ. ಅನಿಲ್ ಶರ್ಮಾ ಮಂಡಿ ಮತ್ತು ಸತ್ಪಾಲ್ ಸಿಂಗ್ ಸತ್ತಿ ಉನಾದಿಂದ ಸ್ಪರ್ಧಿಸಲಿದ್ದಾರೆ. ರಾಜ್ಯದಲ್ಲಿ ನವೆಂಬರ್ 12 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
ಹಿಮಾಚಲ ವಿಧಾನ ಸಭೆಯ ಅವಧಿ ಜನವರಿ 8ಕ್ಕೆ ಕೊನೆಗೊಳ್ಳಲಿದೆ. ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ವಿಧಾನಸಭಾ ಸ್ಥಾನಗಳಿವೆ. ಈ ಪೈಕಿ 20 ಸೀಟುಗಳನ್ನು ಮೀಸಲಿಡಲಾಗಿದೆ. 17 ಸ್ಥಾನಗಳನ್ನು ಪರಿಶಿಷ್ಟ ಜಾತಿಗೆ (ಎಸ್ಸಿ) ಮತ್ತು 3 ಸ್ಥಾನಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಮೀಸಲಿಡಲಾಗಿದೆ.
2017ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲುವು ದಾಖಲಿಸಿ ಸರ್ಕಾರ ರಚಿಸಿತ್ತು. ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಸಿಪಿಐ(ಎಂ) ಒಂದು ಸ್ಥಾನ ಮತ್ತು ಸ್ವತಂತ್ರ ಅಭ್ಯರ್ಥಿಗಳು ಎರಡು ಸ್ಥಾನಗಳನ್ನು ಗೆದ್ದಿದ್ದಾರೆ. ಹಿಮಾಚಲದಲ್ಲಿ ನವೆಂಬರ್ 12 ರಂದು ಮತದಾನ, ಡಿಸೆಂಬರ್ 8 ರಂದು ಫಲಿತಾಂಶ; ಇದೇ ವೇಳೆ ಗುಜರಾತ್ ಚುನಾವಣೆ ನಡೆಯುವ ಸಾಧ್ಯತೆ ಇದೆ
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಒಂದೇ ಹಂತದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಆಯೋಗ ಶುಕ್ರವಾರ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.
Himachal Election 2022 – BJP releases first list of 62 candidates