ಹಿಮಾಚಲ ಪ್ರದೇಶದಲ್ಲಿ ಭೂಕುಸಿತ – ಜನ ಸಹಿತ ಅವಶೇಷಗಳಡಿ ಸಿಲುಕಿದ ವಾಹನಗಳು – 1 ಬಲಿ
ಹಿಮಾಚಲಪ್ರದೇಶ : ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ವಾಹನಗಳು ಜನಸಹಿತ ಅವಶೇಷಗಳ ಅಡಿ ಸಿಲುಕಿವೆ.. ಜೀವಗಳು ಹೋಗುವ ಭೀತಿ ಇದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಶಂಕೆ ವ್ಯಕ್ತವಾಗಿದೆ. ಕಲ್ಲುಗಳು ಇನ್ನೂ ಬೀಳುತ್ತಲೇ ಇರುವುದರಿಂದ ರಕ್ಷನಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎನ್ನಲಾಗಿದೆ..
ಕಿನ್ನೌರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ.. ಪರಿಣಾಮ ಸುಮಾರು 40 ಮಂದಿ ಮಣ್ಣು ಕಲ್ಲಿನ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಜಿಲ್ಲಾಧಿಕಾರಿ ಅಬಿದ್ ಹುಸೇನ್ ಸಾಕಿಖ್ ಹೇಳಿದ್ದಾರೆ. 40 ಮಂದಿ ಪ್ರಯಾಣಿಸುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ನಿಗಮದ ಬಸ್ ಸೇರಿದಂತೆ ಹಲವು ವಾಹನಗಳು ಮಣ್ಣಿನ ಅಡಿಯಲ್ಲಿ ಸಿಲುಕಿವೆ. ಕಿನ್ನೌರ್‌ನ ರಿಕಾಂಗ್ ಪಿಓದಿಂದ ಶಿಮ್ಲಾಗೆ ಬಸ್ ಸಂಚರಿಸುತ್ತಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸದನದಲ್ಲಿ ಗದ್ದಲ : ವಿಪಕ್ಷಗಳ ಕೃತ್ಯ ಖಂಡಿಸುತ್ತಾ ಭಾವುಕರಾದ ಸಭಾಪತಿ ವೆಂಕಯ್ಯ ನಾಯ್ಡು
ಇನ್ನೂ ಸಹ ಕಲ್ಲುಗಳು ಜಾರಿ ಬೀಳುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭಾರತೀಯ ಸೇನೆ, NDRF ತಂಡ ಹಾಗೂ ಸ್ಥಳೀಯ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಬರುವಂತೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಭೂಕುಸಿತದ ಪರಿಣಾಮವಾಗಿ ಸಾಕಷ್ಟು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಶಂಕೆ ವ್ಯಕ್ತವಾಗಿದೆ.








