ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಿಂದಿ ಕಿರುತೆರೆಯ ಖ್ಯಾತ ನಟಿ Saaksha Tv
ಸಿನಿಮಾ: ಹಿಂದಿ ಕಿರುತೆರೆಯ ಖ್ಯಾತ ನಟಿ ಕರಿಷ್ಮಾ ತನ್ನಾ ಅವರು ತಮ್ಮ ಬಹುಕಾಲದ ಗೆಳೆಯನ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೆಲ ವರ್ಷಗಳ ಹಿಂದೆ ಪಾರ್ಟಿ ಒಂದರಲ್ಲಿ ಕರೀಷ್ಮಾ ಅವರಿಗೆ ವರುಣ್ ಬಂಗೇರ ಪರಿಚಯವಾಗಿದ್ದರು. ಪರಿಚಯ ಸ್ನೇಹವಾಗಿ ಸ್ನೇಹ ಪ್ರೀತಿಗೆ ತಿರುಗಿತ್ತು. ಈಗ ಅವರು ಮದುವೆ ಆಗಿದ್ದಾರೆ. ವರುಣ್ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್ ಆಗಿದೆ. ಮದುವೆಯ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಗುರುವಾರದಿಂದಲೇ ಕರೀಷ್ಮಾ ಹಾಗೂ ವರುಣ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಗುರುವಾರ ಅರಶಿಣ ಕಾರ್ಯಕ್ರಮಗಳು ಜೋರಾಗಿ ನಡೆದಿತ್ತು. ಆ ಬಳಿಕ ಮೆಹಂದಿ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿದ್ದು, ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮದುವೆ ದಿನ ನಟಿ ಕರೀಷ್ಮಾ ತನ್ನಾ ಅವರು ಗುಲಾಬಿ ಬಣ್ಣದ ಲೆಹೆಂಗಾದಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಇತ್ತ ವರುಣ್ ಅವರು ಕರಿಷ್ಮಾರ ಲೆಹೆಂಗಾ ಬಣ್ಣಕ್ಕೆ ಹೊಂದಿಕೆಯಾಗುವ ಪೇಟ ಬಿಳಿ ಶೆರ್ವಾನಿ ಧರಿಸಿ ಮಿಂಚಿದ್ದಾರೆ.
ಕರಿಷ್ಮಾ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ… ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಂದ ಹಿಡಿದು , ನಟಿ ಅದಾ ಖಾನ್ ,ರಿಚಾ ಚಡ್ಡಾ ಸೇರಿದಂತೆ ಅನೇಕರು ವಿಶ್ ಮಾಡ್ತಿದ್ದಾರೆ.