- Hindu : ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ
ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ
ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ 8 ಜನರ ಆಡಳಿತ ಮಂಡಳಿ ರಚನೆ ಮಾಡಿತ್ತು. ಇದೀಗ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ದತ್ತ ಪೀಠದಲ್ಲಿ ಡಿಸೆಂಬರ್ 6, ರಿಂದ 8 ರ ವರೆಗೆ ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ನೀಡಿದೆ .
Hindu: Appointment of two Hindu priests to Dattapeeth