ವಿಜಯಪುರ: ಜೈಲಿನಲ್ಲಿ ಶ್ರೀರಾಮೋತ್ಸವ ಆಚರಿಸಿದ್ದಕ್ಕೆ ಹಿಂದು ಕೈದಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.
ವಿಜಯಪುರದ ಜೈಲಿನಲ್ಲಿ (Vijaypura Jail) ಕೆಲ ಕೈದಿಗಳು ಜೈಲಿನಲ್ಲಿ ರಾಮೋತ್ಸವ ಆಚರಿಸಿದ್ದರು ಎನ್ನಲಾಗಿದೆ. ಆದರೆ, ಇದನ್ನು ಸಹಿಸದ ಮುಸ್ಲಿಂ ಕೈದಿಗಳು ಹಿಂದೂ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ವಿಜಯಪುರದ ಕೇಂದ್ರ ಕಾರಾಗೃಹದ ದರ್ಗಾ ಜೈಲಿನಲ್ಲಿ ಈ ಆರೋಪ ಕೇಳಿ ಬಂದಿದೆ. ಜ.22ರಂದು ಮಹಾರಾಷ್ಟ್ರ ಮೂಲದ ಪರಮೇಶ್ವರ ಜಾಧವ, ರಮೇಶ ದಳವಿ, ಪ್ರದೀಪ ಮಾನೆ ಎಂಬ ಹಿಂದೂ ಕೈದಿಗಳು ಶ್ರೀರಾಮೋತ್ಸವ ಆಚರಿಸಿದ್ದರು. ಇದರಿಂದ ಕೋಪಗೊಂಡ ಜೈಲರ್ ತನ್ನ ಕಚೇರಿಗೆ ಕರೆಸಿ ಮುಸ್ಲಿಂ ಕೈದಿಗಳಿಂದ ಹಲ್ಲೆ ಮಾಡಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲ್ನಲ್ಲಿರುವ ಶೇಖ್ ಅಹ್ಮದ್ ಹಾಗೂ ಸಹಚರರು ಹಲ್ಲೆ ನಡೆಸಿದ್ದಾರ ಎಂಬ ಆರೋಪ ಕೇಳಿ ಬಂದಿದೆ.
ಇತರ ಮುಸ್ಲಿಂ ಅಧಿಕಾರಿಗಳೂ ಸಾಥ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಆರೋಪ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.