ಢಾಕಾ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತೆ ಆರಂಭವಾಗಿದ್ದು, ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರ ಬಂಧನ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ಹಿಂದೂ ನ್ಯಾಯವಾದಿಯೊಬ್ಬರ ಹತ್ಯೆಯಾಗಿದೆ.
ಭದ್ರತಾ ಸಿಬ್ಬಂದಿ ಮತ್ತು ಹಿಂದೂ ಸಮುದಾಯದ ನಾಯಕನ ಅನುಯಾಯಿಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಮೃತ ವಕೀಲನನ್ನು 35 ವರ್ಷದ ಸೈಫುಲ್ ಇಸ್ಲಾಂ ಅಲಿಫ್ (Saiful Islam Alif) ಎಂದು ಗುರುತಿಸಲಾಗಿದೆ. ಇವರು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಚಟ್ಟೋಗ್ರಾಮ್ ಜಿಲ್ಲಾ ವಕೀಲರ ಸಂಘದ ಸದಸ್ಯ ಎಂದು ಢಾಕಾದ ಪತ್ರಿಕೆ ನವರದಿ ಮಾಡಿದೆ.
ಧ್ವನಿ ಗ್ರೆನೇಡ್, ಅಶ್ರುವಾಯು ಶೆಲ್‌ಗಳು ಮತ್ತು ಲಾಠಿ ಚಾರ್ಜ್ ಅಸ್ತ್ರಗಳನ್ನು ಪ್ರತಿಭಟನಾಕಾರರ ಮೇಲೆ ಪ್ರಯೋಗಿಸಿದ್ದರಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಅವರು ಧ್ವನಿ ಎತ್ತಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಅವರನ್ನು ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದು, ಅದು ಹಿಂಸಾರೂಪ ತಳೆದಿದೆ.