ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಾಂಗ್ಲಾದೇಶದಲ್ಲಿ ಹಿಂದೂಗಳು ಸಮಾನರು; ಅಲ್ಪಸಂಖ್ಯಾತರೆಂದು ಭಾವಿಸಬೇಡಿ – ಪ್ರಧಾನಿ ಶೇಖ್ ಹಸೀನಾ

ಬಾಂಗ್ಲಾದೇಶದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿವೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಹಿಂದೂಗಳು ತಮ್ಮನ್ನು ಅಲ್ಪಸಂಖ್ಯಾತರು ಎಂದು ಭಾವಿಸಬಾರದು ಎಂದು ಹೇಳಿದ್ದಾರೆ.

Naveen Kumar B C by Naveen Kumar B C
August 19, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಾಂಗ್ಲಾದೇಶದಲ್ಲಿ ಹಿಂದೂಗಳು ಸಮಾನರು; ಅಲ್ಪಸಂಖ್ಯಾತರೆಂದು ಭಾವಿಸಬೇಡಿ – ಪ್ರಧಾನಿ ಶೇಖ್ ಹಸೀನಾ

ಬಾಂಗ್ಲಾದೇಶದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿವೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಹಿಂದೂಗಳು ತಮ್ಮನ್ನು ಅಲ್ಪಸಂಖ್ಯಾತರು ಎಂದು ಭಾವಿಸಬಾರದು ಎಂದು ಹೇಳಿದ್ದಾರೆ.  ದೇಶದಲ್ಲಿ ಧರ್ಮ ಭೇದವಿಲ್ಲದೆ ಎಲ್ಲರೂ ಸಮಾನ ಹಕ್ಕುಗಳನ್ನ ಅನುಭವಿಸಬಹುದು. ಆದರೆ, ಯಾವುದೇ ಸಣ್ಣ ದಾಳಿ ನಡೆದಾಗ ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಅಪಪ್ರಚಾರ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.  ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅವರು ಢಾಕೇಶ್ವರಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್ ಮೋಡ್‌ನಲ್ಲಿ ಭಾಗವಹಿಸಿದರು.

ಎಲ್ಲಾ ಧರ್ಮದವರೂ ಸಮಾನ ಹಕ್ಕುಗಳೊಂದಿಗೆ ಬದುಕಬೇಕು ಎಂದು ಬಯಸುತ್ತದೆವೆ. ಬಾಂಗ್ಲಾದೇಶದ ಎಲ್ಲಾ ನಾಗರಿಕರಿಗೂ ಸಮಾನ ಹಕ್ಕುಗಳಿವೆ.  ನನಗಿರುವಂತೆಯೇ ನಿಮಗೂ ಅದೇ ಹಕ್ಕುಗಳಿವೆ. “ನಿಮ್ಮನ್ನ ನೀವು ಕೀಳಾಗಿ ನೋಡಿಕೊಳ್ಳಬೇಡಿ ಎಂದು  ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.  ಎಲ್ಲರೂ ಒಂದೇ ರೀತಿಯ ಆತ್ಮಸ್ಥೈರ್ಯದಿಂದ ನಡೆದುಕೊಂಡರೆ ಯಾವುದೇ ಧರ್ಮದ ದುಷ್ಟ ಶಕ್ತಿಗಳು ದೇಶದ ಧಾರ್ಮಿಕ ಸೌಹಾರ್ದತೆ ಕದಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ನಂಬಿಕೆ, ಒಗ್ಗಟ್ಟು ಗಟ್ಟಿಯಾಗಬೇಕು ಎಂದರು. “ನಿಮ್ಮೆಲ್ಲರಿಂದ ನಾನು ಬಯಸುವುದು ಇದನ್ನೇ” ಎಂದು ಅವರು ಹೇಳಿದರು.

Related posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

May 9, 2026
ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

May 9, 2026

ಬಾಂಗ್ಲಾದೇಶದ ಒಂದು ವರ್ಗದ ಹಿಂದುಗಳ ವಿರುದ್ಧ ಪಿಎಂ ಹಸೀನಾ ಕೋಪಗೊಂಡಿದ್ದರು. “ನಾನು ಬಹಳ ವಿಷಾದದಿಂದ ಒಂದು ವಿಷಯವನ್ನು ಹೇಳುತ್ತಿದ್ದೇನೆ. ದೇಶದಲ್ಲಿ ಯಾವುದೇ ಘಟನೆ ನಡೆದಾಗ ದೇಶ-ವಿದೇಶಗಳಲ್ಲಿ ವ್ಯಾಪಕ ಪ್ರಚಾರವಾಗುತ್ತದೆ. ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕು ಇಲ್ಲ ಎಂದು ದೊಡ್ಡ ಮಟ್ಟದಲ್ಲಿ ಹೇಳುತ್ತಾರೆ. ಘಟನೆ ನಡೆದ ಕೂಡಲೇ ಸರಕಾರ ಕ್ರಮ ಕೈಗೊಳ್ಳುತ್ತಿದೆ, ಕ್ರಮ ಕೈಗೊಂಡರೂ ಹಿಂದೂಗಳಿಗೆ ದೇಶದಲ್ಲಿ ಹಕ್ಕಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ದೇವಾಲಯಗಳ ರಕ್ಷಣೆಗಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಮುಸ್ಲಿಮರು ಸಾವನ್ನಪ್ಪಿದ್ದರು ಎಂದು ಸ್ಮರಿಸಿದರು.

ಪಶ್ಚಿಮ ಬಂಗಾಳ ಮತ್ತು ಕೋಲ್ಕತ್ತಾದಲ್ಲಿ ಸ್ಥಾಪಿಸಲಾಗಿರುವ ದುರ್ಗಾಪೂಜಾ ಮಂಟಪಗಳಿಗಿಂತ ಢಾಕಾದಲ್ಲಿ ಹೆಚ್ಚಿನ ಮಂಟಪಗಳಿವೆ ಎಂದು ಅವರು ಹೇಳಿದರು. ಬಾಂಗ್ಲಾದೇಶದಲ್ಲಿ ದುರ್ಗಾಪೂಜೆಯನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದರು. ತಮ್ಮ ಸರ್ಕಾರ ಮಸೀದಿಗಳ ಆಧುನೀಕರಣ ಮತ್ತು ದುರಸ್ತಿಗೆ ಮಾತ್ರವಲ್ಲದೆ ದೇವಾಲಯಗಳು, ಚರ್ಚ್‌ಗಳು ಮತ್ತು ಮಠಗಳ ಜೀರ್ಣೋದ್ಧಾರ ಮತ್ತು ದುರಸ್ತಿಗೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ ಎಂದಿದ್ದಾರೆ.

Tags: BangladeshhindusPrime ministerSheikh Hasina
ShareTweetSendShare
Join us on:

Related Posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

by Shwetha
May 9, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

by Shwetha
May 9, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram