ವಿದ್ಯಾರ್ಥಿಗಳಿಗೆ ಪ್ರಚೋದನೆ ಆರೋಪ, ಯೂಟ್ಯೂಬರ್ ಹಿಂದುಸ್ಥಾನಿ ಬಾವು ಅರೆಸ್ಟ್
ಮುಂಬೈ : 10 ಮತ್ತು 12 ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆಗೆ ಒತ್ತಾಯಿಸಿ ಸೋಮವಾರ ಧಾರಾವಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನ ಪ್ರಚೋದನೇ ನೀಡಿದ್ದಾರೆ ಎಂದು ಯೂಟ್ಯೂಬರ್ ಹಿಂದೂಸ್ತಾನಿ ಭಾವು ಆಲಿಯಾಸ್ ವಿಕಾಸ್ ಫಟಕ್ ಅವರನ್ನು ಮುಂಬೈನಲ್ಲಿ ಧಾರಾವಿ ಪೊಲೀಸರು ಬಂಧಿಸಿದ್ದಾರೆ.
ಸಾಂಕ್ರಾಮಿಕ ರೋಗದ ಮಧ್ಯೆ ಆನ್‌ಲೈನ್ ಪರೀಕ್ಷೆಗಳಿಗೆ ಒತ್ತಾಯಿಸಿ ಸೋಮವಾರ ಮುಂಬೈ ಮತ್ತು ನಾಗ್ಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಪ್ರತಿಭಟನೆಯ ನಂತರ, ಯೂಟ್ಯೂಬರ್ ಹಿಂದೂಸ್ತಾನಿ ಭಾವು ಅವರು ಮಹಾರಾಷ್ಟ್ರದ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಅವರ ನಿವಾಸಿ ಬಳಿಯಿರುವ ಧಾರಾವಿ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸೇರುವಂತೆ ವೀಡಿಯೊದಲ್ಲಿ ಕೇಳಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಹಾಜರಿದ್ದ ಯೂಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಸೋಮವಾರ ಹೇಳಿದ್ದಾರೆ.
ಸೋಮವಾರ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ನಾಗಪುರದಲ್ಲಿ ಧರಣಿ ನಿರತ ವಿದ್ಯಾರ್ಥಿಗಳು ಎರಡು ಬಸ್‌ಗಳಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ಭಾಗಗಳಲ್ಲಿ ವಿಧ್ವಂಸಕತೆಗೆ ಕಾರಣವಾದ ಬೃಹತ್ ಪ್ರತಿಭಟನೆಯ ಪ್ರಾಥಮಿಕ ತನಿಖೆಯ ಪ್ರಕಾರ, ಹಿಂದೂಸ್ತಾನಿ ಭಾವು ತನ್ನ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಕೇಳಿಕೊಂಡಿದ್ದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಲಯ V ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಣಯ್ ಅಶೋಕ್, “ವಿದ್ಯಾರ್ಥಿಗಳ ಪ್ರಚೋದನೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.








