ಹಿರೇಕೆರೂರು ಕೋವಿಡ್ ಕೇರ್ ಸೆಂಟರ್ ಕಾರ್ಯವೈಖರಿ ಪರಿಶೀಲನೆ
ಹಾವೇರಿ : ಹಿರೇಕೆರೂರು ಮತಕ್ಷೇತ್ರದ ಕೋವಿಡ್ ಕೇರ್ ಸೆಂಟರ್ ಕಾರ್ಯವೈಖರಿ ಪರಿಶೀಲನೆಗೆಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಂದಾಗಿದ್ದಾರೆ.
ಸಚಿವರ ಸೂಚನೆ ಮೇರೆಗೆ ಸಚಿವರ ಆಪ್ತ ಸಹಾಯಕರು ತಾಲೂಕಿನ ದೂದಿಹಳ್ಳಿಯಲ್ಲಿನ ಮುರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ನಿಲಯದಲ್ಲಿ ನಿರ್ಮಾಣಗೊಂಡಿರುವ “ಕೋವಿಡ್ ಕೇರ್” ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿರೇಕೆರೂರು ಮತಕ್ಷೇತ್ರದಲ್ಲಿ ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿ.ಸಿ.ಪಾಟೀಲರು ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿ,ಸೋಂಕು ಕುರಿತು ಜಾಗೃತಿ ಮೂಡಿಸಲು ಹಾಗೂ ಸೋಂಕಿತರ ಆರೋಗ್ಯ ಕಾಪಾಡಲು ಸೂಚನೆ ನೀಡಿದ್ದು,ತಾವೇ ಖುದ್ದು ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದೀಗ ಕೋವಿಡ್ ಕೇರ್ ಸೆಂಟರ್‍ನಲ್ಲಿ ಶುಚಿತ್ವ, ಸೋಂಕಿತರಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆಗೆ ಸಚಿವರು ಮುಂದಾಗಿದ್ದಾರೆ. ಈ ಸಂಬಂಧ ಆಪ್ತ ಸಹಾಯಕರಿಗೆ ಸೂಚನೆ ನೀಡುವ ಮೂಲಕ ದೂದೀಹಳ್ಳಿಯ ಕೋವಿಡ್ ಕೇರ್ ಸೆಂಟರ್ ಕುರಿತ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
ಪರಿಶೀಲನೆ ವೇಳೆ ಮನೋಜ್ ಹಾರನಹಳ್ಳಿ , ನಾಗರಾಜ್ ಬಣಕಾರ್, ರವಿಬಾಳಿಕಾಯಿ ಸೇರಿದಂತೆ ವಿದ್ಯಾರ್ಥಿ ನಿಲಯದ ಉಸ್ತುವಾರಿ ಇದ್ದರು.