ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಾರ್ಚ್ 21ರಂದು ಅಧಿಕೃತ ಚಾಲನೆ ದೊರಕಿದೆ. ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಉತ್ಸವ ಆರಂಭವಾಗಿದೆ.
ಒಟ್ಟು 11 ದಿನಗಳ ಕಾಲ ನಡೆಯುವ ಈ ಮಹೋತ್ಸವದಲ್ಲಿ ಮಾರ್ಚ್.30ರಂದು ಹಸಿ ಕರಗ ನಡೆಯಲಿದ್ದು, ಏಪ್ರಿಲ್ 1ರಂದು ಮಧ್ಯರಾತ್ರಿ ಕರಗ ಶಕ್ತ್ಯೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಬ್ರೌಪದಿ ದೇವಿಯ ಹೂವಿನ ಕರಗವು ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಲಿದೆ.
ಈ ಬಾರಿಯ ಕರಗವನ್ನು ಎ.ಜ್ಞಾನೇಂದ್ರ ಸ್ವಾಮಿ ಹೊರಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ನಗರದ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಈ ಉತ್ಸವಕ್ಕೆ ಭಕ್ತರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ.








