ಬೆಂಗಳೂರಿನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ಸೋಮವಾರ ಅಧಿಕೃತ ಚಾಲನೆ ನೀಡಲಾಯಿತು ಇನ್ನೂ ಮೂರು ದಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಮೂರು ದಿನ ನಡೆಯಲಿರುವ ಕಡಲೆಕಾಯಿ ಪರಿಷೆಗೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿದೆ.
ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಹಾಗೂ ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ಕರೆ ನೀಡಲಾಗಿದ್ದು, ಪರಿಷೆಗೆ ಬನ್ನಿ , ಬಟ್ಟೆ ಬ್ಯಾಗ್ ತನ್ನಿ ಎಂದು ಕರೆ ನೀಡಲಾಗಿದೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ಪರಿಷೆಯನ್ನು ಜಾರಿಗೆ ತರಲು ಪಣ ತೊಡಲಾಗಿದ್ದು ಪ್ಲಾಸ್ಟಿಕ್ ಬಳಸದಂತೆ ವ್ಯಾಪಾರಿಗಳಲ್ಲಲಿ ಜಾಗೃತಿ ಮೂಡಿಸಲು ಪಾಲಿಕೆ ಹಾಗೂ ಮುಜರಾಯಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ಬೆಂಗಳೂರಿನಲ್ಲಿ ನೆಲೆಸಿರುವವರು ಕೊಂಚ ಬಿಡುವು ಮಾಡಿಕೊಂಡು ಜಾತ್ರೆಯ ಸೊಬಗನ್ನು ಸವಿದು ಖುಷಿ ಪಡೆಯಿರಿ.ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ತುಸು ಜಾಗೃತೆ ವಹಿಸಿ








