ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀನಿಮಿಷಾಂಬಾ ದೇವಸ್ಥಾನ ಇತಿಹಾಸ ಮತ್ತು ಮಹಿಮೆ

History and Glory of Srinimishamba Temple

Shwetha by Shwetha
March 10, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಶ್ರೀನಿಮಿಷಾಂಬಾ ದೇವಸ್ಥಾನವು ಕರ್ನಾಟಕ ರಾಜ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಐತಿಹಾಸಿಕ ಪುರಾಣ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಶ್ರಿರಂಗಪಟ್ಟಣದಿಂದ 3 ಕಿ.ಮೀ ದೂರದಲ್ಲಿ ಗಂಜಾಂ ಗ್ರಾಮದ ಕಾವೇರಿ ನದಿ ತೀರದಲ್ಲಿ ಇದೆ. ಈ ದೇವಸ್ಥಾನ ಆಗಮೋಕ್ತ ರೀತ್ಯಾ ನಿರ್ಮಾಣವಾಗಿದ್ದು ಶಿವಪಂಚಾಯತನ ಕ್ರಮದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಇಲ್ಲಿ ಸೂರ್ಯದೇವ, ಗಣಪತಿ, ಶ್ರೀಚಕ್ರಸಹಿತ ಶ್ರೀ ನಿಮಿಷಾಂಬಾದೇವಿ, ಶ್ರೀ ಮೌಕ್ತಿಕೇಶ್ವರಸ್ವಾಮಿ ಮತ್ತು ಶ್ರೀ ಲಕ್ಷ್ಮಿನಾರಾಯಣ ಸ್ವಾಮಿ ದೇವರುಗಳ ಸನ್ನಿಧಿಗಳಿವೆ.

ಕ್ರಿ.ಶ.1578 ರಿಂದ 1617 ರವರೆಗೆ ಶ್ರೀರಂಗಪಟ್ಟಣ ಮೈಸೂರಿನ ರಾಜಧಾನಿ ಆಗಿತ್ತು. ಆ ಸಮಯದಲ್ಲಿ ಮೈಸೂರಿನ ರಾಜಒಡೆಯರ್ ರವರು ಶ್ರೀ ನಿಮಿಷಾಂಬಾ ದೇವಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನವನ್ನು ಕಟ್ಟಿಸಿದರೆಂದು ಕರ್ನಾಟಕ ಚಿತ್ರಕಲಾ ಪರಿಷತ್ ಪ್ರಕಟಿಸಿರುವ ಶ್ರೀ ಎಸ್.ಆರ್.ರಾವ್ ಮತ್ತು ಬಿ.ವಿ.ಕೆ.ಶಾಸ್ತ್ರಿರವರು ಬರೆದ ಟ್ರಡಿಷನಲ್ ಪೇಂಟಿಂಗ್ ಆಫ್ ಕರ್ನಾಟಕ ಎಂಬ ಪುಸ್ತಕದಲ್ಲಿ ಉಲ್ಲೇಖವಾಗಿದೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಶ್ರೀ ನಿಮಿಷಾಂಬಾ ದೇವಿಯ ಉದ್ಭವದ ಹಿನ್ನೆಲೆ ಮತ್ತು ಶ್ರೀಚಕ್ರದ ವಿಶೇಷತೆ:

ಶ್ರೀ ಪರಮೇಶ್ವರನ ಆಜ್ಞೆಯಂತೆ ಸುಮನಸ್ಕನು ಪೌಂಡರೀಕ ಯಾಗವನ್ನು ಲೋಕ ಕಲ್ಯಾಣಾರ್ಥವಾಗಿ ಮಾಡಲು ನಿಶ್ಚಯಿಸಿದನು. ಅದರಂತೆ ಯಾಗದ ರಕ್ಷಣೆಯ ಹೊಣೆಯನ್ನು ಸಾಕ್ಷಾತ್ ರುದ್ರರೂಪಿಯಾದ ಮುಕ್ತಕ ಋಷಿಗೆ ವಹಿಸಿದರು. ಈ ವಿಚಾರವನ್ನು ಜಾನು ಮತ್ತು ಸುಮಂಡಲರು ಶ್ರೀಮನ್ನಾರದರಿಂದ ತಿಳಿದುಕೊಂಡರು. ಹೇಗಾದರೂ ಮಾಡಿ ಈ ಯಾಗವನ್ನು ಕೆಡಿಸಲೇಬೇಕೆಂದು ತಮ್ಮ ಗುರುಗಳಾದ ಶುಕ್ರಾಚಾರ್ಯರಲ್ಲಿ ಮಂತ್ರಾಲೋಚನೆ ನಡೆಸಿದರು. ಜಾನು ಮತ್ತು ಸುಮಂಡಲರು ತಮ್ಮ ಮಂತ್ರಿಗಳಾದ ಶೂರಬಾಹು ಮತ್ತು ಘಟೋದರರಿಂದೊಡಗೂಡಿದ ಸೈನ್ಯವನ್ನು ಕಳುಹಿಸಿದರು. ಇವರ ಸೈನ್ಯವನ್ನು ಕ್ಷಣಾರ್ಧದಲ್ಲಿ ಮುಕ್ತಕನು ಸಂಹರಿಸಿದನು. ಈ ಸುದ್ದಿಯನ್ನು ತಿಳಿದ ಜಾನು ಮತ್ತು ಸುಮಂಡಲರು ಕೋಪಗೊಂಡು ಸ್ವತಃ ತಾವೇ ಮುಕ್ತಕ ಋಷಿಯೊಡನೆ ಯುದ್ಧಕ್ಕೆ ಸನ್ನದ್ಧರಾದರು. ವೀರಾವೇಶದಿಂದ ಯುದ್ಧವನ್ನು ಮಾಡಿದರು. ಈ ಯುದ್ಧದಲ್ಲಿ ಮುಕ್ತಕನು ಸೋಲನ್ನನುಭವಿಸಬೇಕಾಯಿತು. ಮುಕ್ತಕನಲ್ಲಿರುವ ಎಲ್ಲಾ ಅಸ್ತ್ರಗಳು ನಿಷ್ಪ್ರಯೋಜಕವಾದವು. ಯುದ್ಧದಲ್ಲಿ ಸೋತ ಮುಕ್ತಕನು ಪಾರ್ವತಿಯನ್ನು ಕುರಿತು ಪ್ರಾರ್ಥಿಸಿದನು. ಕ್ಷಣಮಾತ್ರದಲ್ಲಿ ಪಾರ್ವತಿದೇವಿಯು ಯಜ್ಞಕುಂಡದಿಂದ ಉದ್ಭವಿಸಿದಳು. ಜಾನು ಮತ್ತು ಸುಮಂಡಲರು ಯಾವುದೇ ಆಯುಧದಿಂದ ತಮ್ಮ ಸಂಹಾರ ಆಗಬಾರದೆಂದು ಬ್ರಹ್ಮನಿಂದ ವರ ಪಡೆದಿದ್ದನ್ನು ತಿಳಿದ ಪಾರ್ವತಿದೇವಿಯು ತನ್ನ ದಿವ್ಯದೃಷ್ಟಿಯಿಂದ ನಿಮಿಷ ಮಾತ್ರದಲ್ಲಿ ಅವರನ್ನು ಸಂಹರಿಸಿದಳು. ಯಜ್ಞಪೂರ್ಣಗೊಳ್ಳುವಂತೆ ನೋಡಿಕೊಂಡಳು. ಇದರಿಂದ ಸಂತುಷ್ಟನಾದ ಮುಕ್ತಕ ಋಷಿಯು ಓ ಜಗನ್ಮಾತೆ ನಿಮಿಷಾಂಬಾ ಎಂಬ ಹರ್ಷೋದ್ಗಾರ ಮಾಡಿದನು. ಅಂದಿನಿಂದ ಪಾರ್ವತಿದೇವಿಗೆ ನಿಮಿಷಾಂಬಾ ಎಂಬ ಹೆಸರು ಬಂದಿತು.

ತ್ರಿಶೂಲ, ಡಮರು, ಅಭಯಹಸ್ತ ಮತ್ತು ವರದ ಹಸ್ತಗಳಿಂದ ಶೋಭಿಸುವ ಶ್ರೀ ನಿಮಿಷಾಂಭಾ ದೇವಿಯು ಭಕ್ತಜನರ ಕಲ್ಪತರು. ಮುಗುಳುನಗೆ ಸೂಸುವ ಮುಖಮುದ್ರ ಏಕಾಸನದಲ್ಲಿ ಕುಳಿತಿರುವ ನಿಮಿಷಾಂಬಾ ಶ್ರೀಚಕ್ರಾಂಕಿತೆ ಎದುರಿನಲ್ಲಿರುವ ಶ್ರೀ ಚಕ್ರವು ಅಷ್ಟೇ ಪುರಾತನವಾಗಿರುವುದು ಶ್ರೀಕ್ಷೇತ್ರದ ವಿಶೇಷವು ಆಗಿದೆ.

ಭೂ ಪ್ರಸ್ತಾರ, ಕೃಷ್ಣಶಿಲೆಯಲ್ಲಿ ಕೆತ್ತಲ್ಪಟ್ಟ ಶ್ರೀಚಕ್ರವು “ಏಕಮೇವ ಅದ್ವಿತೀಯ” ಎನಿಸಿಕೊಂಡಿದೆ. ಶ್ರೀಚಕ್ರದ ಎಲ್ಲೆಡೆ ದಳಗಳಲ್ಲಿ ತ್ರಿಕೋಣಗಳಲ್ಲಿ, ಭವನಗಳಲ್ಲಿ ಇರುವ ಬೀಜಾಕ್ಷರಗಳು ಜಗದಾಂಬೆ ಶ್ರೀನಿಮಿಷಾಂಬಾ ದೇವಿಯ ಪ್ರಸನ್ನತೆಗೆ ಕಾರಣ.ಇದಾಗಿದೆ. ಇಲ್ಲಿನ ಶ್ರೀದೇವಿಯ ಮೂಲ ಮಂತ್ರಗಳನ್ನುಹೊಂದಿರುವ ಶ್ರೀ ಚಕ್ರ ಅತೀವಿರಳ ಎನ್ನಲಾಗಿದೆ. ಕೇವಲ ದರ್ಶನ ಮಾತ್ರದಿಂದಲೇ ಭಕ್ತರ ಇಷ್ಟಾರ್ಥ ಈಡೇರುವುದಲ್ಲದೆ ಮನಸ್ಸಿಗೆ ಶಾಂತಿ, ನೆಮ್ಮದಿ ಪ್ರಾಪ್ತವಾಗುತ್ತದೆ. ಶ್ರೀನಿಮಿಷಾಂಬಾ ದೇವಿಯಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡಿಕೊಳ್ಳವುದರಿಂದ ಮದುವೆಯಾಗದವರಿಗೆ ಕಲ್ಯಾಣಭಾಗ್ಯವು, ಮಕ್ಕಳಾಗದವರಿಗೆ ಸಂತಾನ ಭಾಗ್ಯವೂ, ಆರ್ಥಿಕ ತೊಂದರೆಯಲ್ಲಿರುವವರಿಗೆ ಧನಧಾನ್ಯ, ಅನಾರೋಗ್ಯದಿಂದ ಕೂಡಿರುವವರಿಗೆ ಆರೋಗ್ಯ ಭಾಗ್ಯ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭಾಗ್ಯವೂ ಪ್ರಾಪ್ತಿಯಾಗುತ್ತದೆ. ಎಂಬುದಾಗಿ ಭಕ್ತಾದಿಗಳ ಇಷ್ಟಾಭಿಲಾಷೆಯನ್ನು ಪೂರೈಸುವ ಆರಾಧ್ಯ ದೈವ ಸ್ವರೂಪಿಣಿ ಶ್ರೀ ನಿಮಿಷಾಂಬಾ ದೇವಿ ಎಂಬುದಾಗಿ ಪ್ರಸಿದ್ದಿಯಾಗಿರುತ್ತದೆ.

ಬಾಗಿಲು ತೆರೆಯುವ ಸಮಯ:

06:30 AM IST – 08:30 PM IST

ಬಾಗಿಲು ಮುಚ್ಚುವ ಸಮಯ

IST – 08:30 PM IST

ಉಪಯುಕ್ತ ಮಾಹಿತಿ:
• ಮಹಾನೈವೈಧ್ಯ : ಮಧ್ಯಾಹ್ನ 12:00 ಕ್ಕೆ ( ನಂತರ ಅರ್ಚನೆ ಪೂಜಾಧಿಗಳು ನಡೆಯುತ್ತದೆ )

• ಪ್ರದೋಷಕಾಲ ಅಭಿಷೇಕ : ಸಂಜೆ 6:30 ರಿಂದ 7:30 (ಭಾನುವಾರ,ಶುಕ್ರವಾರ ,ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ)

• ವಿಶೇಷ ದಿನಗಳಲ್ಲಿ : ಬೆಳಿಗ್ಗೆ 4:00 ರಿಂದ 6:30 ರವರೆಗೆ

• ದರ್ಶನ ವೇಳೆ :ಬೆಳಿಗ್ಗೆ 6:30 ಗಂಟೆಯಿಂದ ರಾತ್ರಿ 8:30 ರವರೆಗೆ

• ಪ್ರತಿ ಮಾಹೆ ಪೌರ್ಣಮಿ ದಿವಸ ಬೆಳಿಗ್ಗೆ 5:00 ರಿಂದ 8:30 ರವರೆಗೆ

ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram