Hit And Run : ಆನೆಕಲ್ ನಲ್ಲಿ ಹಿಟ್ ಅಂಡ್ ರನ್ ಕೇಸ್
ಆನೇಕಲ್ ನಲ್ಲಿ ಹಿಟ್ ಅಂಡ್ ಪ್ರಕರಣ ಬೆಳಕಿಗೆ ಬಂದಿದೆ.. ಬೆಂಗಳೂರಿನ ಹೊರ ವಲಯದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ಕಾರ್ಮಿಕರಿಗೆ ವಾಹನ ಡಿಕ್ಕಿ ಹೊಡೆದಿದೆ..
ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ಮಿಕರ ಮೇಲೆ ಈಚರ್ ವಾಹನ ಹರಿದಿದೆ.. ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು , ಈಚರ್ ವಾಹನ ಸವಾರ ವಾಹನ ಸಮೇತ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮೃತರೆಲ್ಲರೂ ಅಸ್ಸಾಂ ಮೂಲದ ಕೂಲಿ ಕಾರ್ಮಿಕರೆಂಬುದು ತಿಳಿದು ಬಂದಿದೆ..
ಮೃತರ ಸಂಬಂಧಿಕರ ಪತ್ತೆ ಹಚ್ಚಿದ ನಂತರವಷ್ಟೇ ಮೃತರ ಕುರಿತು ಗುರುತು , ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ..







