ಬೆಂಗಳೂರು: ಹಿಟ್ ಆಂಡ್ ರನ್ ಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಆ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ ಸಂಭವಿಸಿದೆ. ಆದರೆ, ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಬೆಂಗಳೂರು-ಹೊಸೂರು (Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಒರಿಸ್ಸಾ ಮೂಲದ ನಿರಂಜನ್ ಸಾವನ್ನಪ್ಪಿದ ವ್ಯಕ್ತಿ. ಹಳೆ ಚಂದಾಪುರಿಂದ ನಡೆದು ಬರುವಾಗ ನಿರಂಜನ್ಗೆ ಈಚರ್ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಪರಾರಿಯಾಗಿರುವ ವಾಹನ ಹಾಗೂ ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.