ಚೀನಾದಲ್ಲಿ ಹೊಸ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ (ಹೆಚ್ಎಂಪಿವಿ) ಅಬ್ಬರಿಸಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೆ ರಾಜ್ಯದಲ್ಲೂ ರಾಜ್ಯಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಜ್ವರ ಇದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಹಾಗೂ ಅನಗತ್ಯ ಓಡಾಟ ತಪ್ಪಿಸಿ
ಆಗಾಗ್ಗೆ ಕೈಗಳನ್ನೂ ಸಾಬೂನು ಹಾಗೂ ಸ್ಯಾನಿಟೈಸರ್ಗಳಿಂದ ಸ್ವಚ್ಛಗೊಳಿಸಿ.
ಜ್ವರ, ಕೆಮ್ಮು, ನೆಗಡಿ ಇರುವವರು ಆದಷ್ಟು ಹೊರಗೆ ಓಡಾಡದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ.
ಜ್ವರ, ಕೆಮ್ಮು, ನೆಗಡಿ ಇರುವವರು ಬಳಸಿದ ಟವಲ್ ಮತ್ತು ಬಟ್ಟೆಗಳನ್ನು ಬೇರೆಯವರು ಬಳಸದಿರಿ.
ನೆಗಡಿ, ಕೆಮ್ಮು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿ ಮಾಡಿ, ಚಿಕಿತ್ಸೆ ಪಡೆಯಿರಿ. ಸ್ವಚ್ಛತೆ ಕಾಪಾಡಿಕೊಳ್ಳಿ. ಪೌಷ್ಠಿಕಾಂಶವಿರುವ ಆಹಾರ ಸೇವಿಸಿ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಚೀನಾದಲ್ಲಿ ಕಾಣಿಸಿಕೊಂಡಿರುವ ಹೆಚ್ಎಂಪಿವಿ ವೈರಸ್ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಲ್ಲ ಮುನ್ನೆಚ್ಚರಿಕೆ ವಹಿಸಿದೆ ಎಂದು ಹೇಳಿರುವ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ಸಾಮಾನ್ಯ ಶೀತ ಮತ್ತು ಐಎಲ್ಯ ಪ್ರಕರಣಗಳಲ್ಲಿ ಯಾವುದೇ ಗಮನಾರ್ಹ ಏರಿಕೆ ಇಲ್ಲ ಎಂದಿದ್ದಾರೆ.








