ಗಾಂಧೀನಗರ: ರಾಜ್ಯದಲ್ಲಿ ಪತ್ತೆಯಾದ ಬೆನ್ನಲ್ಲೇ ಈಗ ಗುಜರಾತ್ ನಲ್ಲೂ (Gujarat) ಮೊದಲ ಹೆಚ್‌ಎಮ್‌ಪಿವಿ ಸೋಂಕು (HMPV Virus) ಪತ್ತೆಯಾಗಿರುವ ಕುರಿತು ವರದಿಯಾಗಿದೆ.
ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಗುಜರಾತ್‌ನಲ್ಲಿ ಮೊದಲ ಸೋಂಕು ವರದಿಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯದಲ್ಲಿ ಎರಡು ಹೆಚ್‌ಎಮ್‌ಪಿವಿ ಪ್ರಕರಣಗಳನ್ನು ದೃಢಪಡಿಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಇದು ಆ ರಾಜ್ಯದಲ್ಲಿ ವರದಿಯಾಗಿರುವ ಮೊದಲ ಪ್ರಕರಣವಾಗಿದೆ. ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ.








